ನವದೆಹಲಿ : ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್‌ಟಿಐಐ) ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್‌ಮನ್ ಆಗಿ ನಟ ಆರ್ ಮಾಧವನ್ ಅವರು ನಾಮನಿರ್ದೇಶನಗೊಂಡಿದ್ದಾರೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ಮಾಹಿತಿಯನ್ನು ಘೋಷಿಸಿದ್ದು, ಮಾಧವನ್ ಅವರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
“ಎಫ್‌ಟಿಐಐ ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್‌ಮನ್ ಆಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ಮಾಧವನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಮತ್ತು ನೈತಿಕತೆಯು ಈ ಸಂಸ್ಥೆಯನ್ನು ಇನ್ನಷ್ಟು ಉತ್ಕೃಷ್ಟಗೊಳಿಸಿ, ಧನಾತ್ಮಕ ಬದಲಾವಣೆಗಳನ್ನು ತರುತ್ತದೆ ಮತ್ತು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ನನಗೆ ಖಾತ್ರಿಯಿದೆ. ನಿಮಗೆ ನನ್ನ ಶುಭಾಶಯಗಳು” ಎಂದು ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.
Heartiest congratulations to @ActorMadhavan ji on being nominated as President of @FTIIOfficial and Chairman of the governing council.
I'm sure that your vast experience & strong ethics will enrich this institute, bring positive changes, & take it to a higher level. My best…
— Anurag Thakur (मोदी का परिवार) (@ianuragthakur) September 1, 2023
ಇದಕ್ಕೆ ಪ್ರತಿಕ್ರಿಯಿಸಿರುವ ನಟ ಮಾಧವನ್, “ಎಲ್ಲಾ ನಿರೀಕ್ಷೆಗಳನ್ನು ಪೂರೈಸಲು ನಾನು ನನ್ನ ಕೈಲಾದಷ್ಟು ಮಾಡುತ್ತೇನೆ” ಎಂದು ಅನುರಾಗ್ ಠಾಕೂರ್ ಅವರನ್ನು ಉಲ್ಲೇಖಿಸಿ ಧನ್ಯವಾದವನ್ನು ತಿಳಿಸಿದ್ದಾರೆ.