ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಮ್ಯಾ ಅವರು ನೆನ್ನೆ ದಿನ ಟ್ವೀಟ್ ಮಾಡಿದ್ದ ವಿಷಯವನ್ನು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಕೆರಳಿಸಿತ್ತು. ನೆನ್ನೆ ದಿನ ನಟಿ ರಮ್ಯಾ ಅವರು ಟ್ವೀಟ್ ಮಾಡುವ ಮೂಲಕ ಗಣೇಶ ಹಬ್ಬದಂದು ಬೆಳಿಗ್ಗೆ 11 ಗಂಟೆಗೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದಿದ್ದರು. ಅದರಂತೆ ಇಂದು ಬೆಳಿಗ್ಗೆ ನಟಿ ರಮ್ಯಾ ಅವರು ಶುಭ ಸುದ್ದಿ ಒಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ.
ಹೌದು ನಟಿ ರಮ್ಯಾ ಅವರು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಟಿ ರಮ್ಯಾ ಅವರು ನಿರ್ಮಾಪಕಿಯಾಗಲಿದ್ದಾರೆ. ಈ ವಿಚಾರವನ್ನು ಸ್ವತಃ ರಮ್ಯಾ ಅವರು ಹಂಚಿಕೊಂಡಿದ್ದು.
ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು ನಾನು ಮತ್ತೆ ಚಿತ್ತಾರಂಗಕ್ಕೆ ಹಿಂತಿರುಗುತ್ತಿದ್ದೇನೆ ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ ಎಂದಿದ್ದಾರೆ.
ಏನಿದು ಆಪಲ್ ಬಾಕ್ಸ್ ?
ಇದೊಂದು ಅಸಾಧಾರಣವಾದ ಆದರೆ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನಟಿ ರಮ್ಯಾ ಅವರ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗೆ ಇದ್ದಿತಂತೆ. ಸೆಟ್ನಲ್ಲಿ ಕೂರಲು ಕುರ್ಚಿಗಳಿಲ್ಲದೆ ಇದ್ದಾಗ ಅಥವಾ ಕ್ಯಾಮರಾದ ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಆಪಲ್ ಬಾಕ್ಸ್ ರಮ್ಯಾ ಅವರಿಗೆ ನೆರವಿಗೆ ಬರುತ್ತಿತ್ತಂತೆ. ಆಪಲ್ ಬಾಕ್ಸ್ ಎಂಬ ಸರಳತೆಯ ಪೆಟ್ಟಿಗೆ ಸದಾ ನನಗೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿದೆ ಎಂದು ನಟಿ ರಮ್ಯಾ ಅವರು ಹೇಳಿದ್ದಾರೆ.
ಸದ್ಯ ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದ್ದು ನನಗೆ ಬಹಳ ಸಂತೋಷವಿದೆ ಈ ಎರಡು ಚಿತ್ರಗಳು ಕೆಆರ್ ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಅದರ ಜೊತೆಯಲ್ಲಿ ಓ ಟಿ ಟಿ ಫ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗೂ ವೆಬ್ ಸೀರಿಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟುಡಿಯೋ ಸಿದ್ಧವಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್ ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ ಎಂದು ನಟಿ ರಮ್ಯಾ ಅವರು ಬರೆದುಕೊಂಡಿದ್ದಾರೆ.
ಮುಂದುವರೆದ ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು ಸಿನಿಮಾ ವರ್ಗದವರು ಮತ್ತು ಎಲ್ಲದಕ್ಕಿಂತ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃದಯಪೂರ್ವಕ ವಂದನೆಗಳು ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಬೆಲೆ ಕಟ್ಟಲಾಗದು. ಇದರ ಜೊತೆಗೆ ವಿಜಯ ಕಿರಗಂದೂರು ಜಯಣ್ಣ ಯೋಗಿ ಜೀ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು. ಹೊಸ ಆರಂಭದತ್ತ ಹೆಜ್ಜೆ ಇಡುತ್ತ ಕೃತಜ್ಞತೆಗಳೊಂದಿಗೆ ಎಂದು ರಮ್ಯಾ ಬರೆದುಕೊಳ್ಳುವ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ತೆರೆ ಇಳಿದಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…