ಸಮಸ್ಯೆ ಬಗೆಹರಿಸುವಂತೆ ಕೋರಿ ಫಿಲ್ಮ್ ಛೇಂಬರ್ ಮೆಟ್ಟಿಲೇರಿದ್ದರು. ಮಾಧ್ಯಮ ಗೋಷ್ಠಿಗಳಲ್ಲೂ ಈ ಕುರಿತಂತೆ ಅವರು ಸಾರ್ವಜನಿಕವಾಗಿ ಸುದೀಪ್ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಸುದೀಪ್ ಕೋರ್ಟ್ ಮೆಟ್ಟಿಲೇರಿದ್ದು, ‘ಕುಮಾರ್ ಹೇಳಿಕೆಯಿಂದ ನಾನು ಇಷ್ಟು ವರ್ಷಗಳ ಕಾಲ ಕಷ್ಟಪಟ್ಟು ಗಳಿಸಿದ್ದ ವರ್ಚಸ್ಸಿಗೆ ಧಕ್ಕೆಯಾಗಿದೆ. ನನ್ನ ಮಾನಹಾನಿಯಾಗಿದೆ‘ ಎಂದು ಆರೋಪಿಸಿ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.