ಮುಂಬೈ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22ರಂದು ಲೋಕಾರ್ಪಣೆಗೆ ರಾಮಮಂದಿರ ಸಜ್ಜುಗೊಂಡಿದೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಮುಖ ರಾಜಕೀಯ ನಾಯಕರು, ಕ್ರೀಡೆ ಹಾಗೂ ಚಿತ್ರರಂಗ ಸೇರಿ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ.
ಕನ್ನಡದ ಖ್ಯಾತ ನಟರಾದ ರಾಕಿಂಗ್ ಸ್ಟಾರ್ ಯಶ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ಆಹ್ವಾನ ನೀಡಲಾಗಿದೆ. ಈ ನಡುವೆ ರಣಬೀರ್ ಕಪೂರ್, ಅಲಿಯಾ ಭಟ್, ಅಜಯ್ ದೇವಗನ್, ಸನ್ನಿ ಡಿಯೋಲ್, ಪ್ರಭಾಸ್ ಸೇರಿದಂತೆ ಚಿತ್ರರಂಗದ ಅನೇಕ ನಟ ನಟಿಯರಿಗೆ ಆಹ್ವಾನ ನೀಡಲಾಗಿದೆ.
ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ಬಾದ್‌ಷಾ ಅಮಿತಾಭ್ ಬಚ್ಚನ್, ನಟಿ ಮಾಧುರಿ ದೀಕ್ಷಿತ್, ನಟ ಅನುಪಮ್ ಖೇರ್, ಅಕ್ಷಯ್ ಕುಮಾರ್, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ತೆಲುಗು ನಟ ಚಿರಂಜೀವಿ, ಮೋಹನ್ ಲಾಲ್, ಧನುಷ್ ಮತ್ತು ಕನ್ನಡದ ರಿಷಬ್ ಶೆಟ್ಟಿ ಅವರನ್ನು ಈ ಹಿಂದೆಯೇ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಉದ್ಯಮಿಗಳಾದ ಮುಕೇಶ್ ಅಂಬಾನಿ, ರತನ್ ಟಾಟಾ ಮತ್ತು ಗೌತಮ್ ಅದಾನಿ ಸೇರಿದಂತೆ 7,000 ಗಣ್ಯರನ್ನು ದೇವಾಲಯದ ಟ್ರಸ್ಟ್ ಆಹ್ವಾನಿಸಿದೆ ಎಂದು ಮೂಲಗಳು ತಿಳಿಸಿವೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸುಮಾರು 3,000 ವಿವಿಐಪಿಗಳು, ದೇಶದ ವಿವಿಧ ಭಾಗಗಳಿಂದ 4,000 ಸಂತರು ಮತ್ತು ಸಾಧುಗಳು, 50 ದೇಶಗಳ ಪ್ರತಿನಿಧಿಗಳು ಮತ್ತು ರಾಮ ಮಂದಿರ ಚಳವಳಿಯ ಭಾಗವಾಗಿದ್ದ ‘ಕರ ಸೇವಕರ’ ಕುಟುಂಬ ಸದಸ್ಯರು ಸೇರಿದಂತೆ 7,000ಕ್ಕೂ ಹೆಚ್ಚು ಜನರಿಗೆ ಆಹ್ವಾನ ಪತ್ರಗಳನ್ನು ಈಗಾಗಲೇ ಕಳುಹಿಸಿದೆ. ಜತೆಗೆ ಚಿತ್ರರಂಗದ ಗಣ್ಯರಿಗೂ ಆಹ್ವಾನ ನೀಡಲಾಗುತ್ತಿದೆ.
2024 ಜನವರಿ 22ರಂದು ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಪ್ರಸಿದ್ಧ ಟಿ.ವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರಧಾರಿ ನಟ ಅರುಣ್ ಗೋವಿಲ್ ಮತ್ತು ಸೀತೆಯ ಪಾತ್ರ ನಿರ್ವಹಿಸಿದ್ದ ದೀಪಿಕಾ ಚಿಖ್ಲಿಯಾ ಅವರಿಗೂ ಆಹ್ವಾನ ನೀಡಲಾಗಿದೆ.
ವಾರಾಣಸಿಯ 21 ಪಂಡಿತರ ತಂಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂಜಾ ಕಾರ್ಯ ನಡೆಸಲಿದೆ. ಖ್ಯಾತ ವೈದಿಕ ವಿದ್ವಾಂಸ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ತಂಡವನ್ನು ಮುನ್ನಡೆಸಲಿದ್ದು, ಅವರ ಇಬ್ಬರು ಪುತ್ರರಾದ ಪಂಡಿತ್ ಜೈಕೃಷ್ಣ ದೀಕ್ಷಿತ್ ಮತ್ತು ಸುನಿಲ್ ದೀಕ್ಷಿತ್ ಮತ್ತು ಕಾಶಿಯ ಇತರ 18 ಪಂಡಿತರು ಮಾರ್ಗದರ್ಶನ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…