ಬೆಂಗಳೂರು : ನಟಿ ಮೇಘನಾ ರಾಜ್ ಅಭಿನಯದ ಹೊಸ ಚಿತ್ರಕ್ಕೆ ‘ತತ್ಸಮ ತದ್ಭವ’ ಎಂದು ಹೆಸರು ಇಡಲಾಗಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್’ ಎಂಬ ಟ್ಯಾಗ್ ಲೈನ್ ಇಡಲಾಗಿದೆ.
ನಟಿ ಮೇಘನಾ ರಾಜ್ ಸರ್ಜಾ ಅವರು ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಪತಿ ಚಿರಂಜೀವಿ ಸರ್ಜಾ ನಿಧನದಿಂದ ಕುಗ್ಗಿದ್ದ ಅವರು, ಬಳಿಕ ಪುತ್ರನ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಈಗ ಸಿನಿಮಾಗಾಗಿಯೂ ಸಮಯ ಹೊಂದಿಸಿಕೊಳ್ಳುತ್ತಿದ್ದಾರೆ. ಮೇಘನಾ ರಾಜ್ ಅವರ ಕಮ್ಬ್ಯಾಕ್ ಚಿತ್ರಕ್ಕೆ ಪನ್ನಗ ಭರಣ ಬಂಡವಾಳ ಹೂಡಲಿದ್ದಾರೆ ಹಾಗೂ ವಿಶಾಲ್ ಆತ್ರೇಯಾ ಅವರು ನಿರ್ದೇಶನ ಮಾಡಲಿದ್ದಾರೆ ಎಂದು ಒಂದಷ್ಟು ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಈಗ ಆ ಚಿತ್ರಕ್ಕೆ ಶೀರ್ಷಿಕೆ ಏನೆಂಬುದು ರಿವೀಲ್ ಆಗಿದೆ. ‘ತತ್ಸಮ ತದ್ಭವʼ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದ್ದು, ಸಾಕಷ್ಟು ಕುತೂಹಲ ಮೂಡಿಸುವಂತಿದೆ.
ಮೇಘನಾ ರಾಜ್ ಸರ್ಜಾ ಅವರು ಸ್ಕ್ರಿಪ್ಟ್ ಆಯ್ಕೆಯಲ್ಲಿ ತುಂಬ ಕಾಳಜಿ ವಹಿಸುತ್ತಾರೆ. ಈ ಬಾರಿ ಅವರು ಆಯ್ದುಕೊಂಡಿರುವ ‘ತತ್ಸಮ ತದ್ಭವ’ ಸಿನಿಮಾದ ಕತೆ ಕೂಡ ಸಖತ್ ತೀವ್ರತೆಯಿಂದ ಕೂಡಿರುವಂತಿದೆ. ಮೇಘನಾ ಅವರ ಬಾಯಿಯನ್ನು ಯಾರೋ ಮುಚ್ಚಿರುವ ರೀತಿಯಲ್ಲಿ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಅವರ ಕಣ್ಣುಗಳಲ್ಲಿ ಭಯ ಎದ್ದು ಕಾಣಿಸುತ್ತಿದೆ. ಈ ಶೀರ್ಷಿಕೆಗೆ ‘ದಿ ಕನ್ಫೆಷನ್’ ಎಂಬ ಟ್ಯಾಗ್ ಲೈನ್ ಕೂಡ ಇದೆ. ಈ ಎಲ್ಲ ಕಾರಣಗಳಿಂದಾಗಿ ‘ತತ್ಸಮ ತದ್ಭವ’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.
ಮಂಡ್ಯ: ರಾಜಕಾರಣಿಗಳನ್ನು ಹೆದರಿಸ ಬಲ್ಲಂತಹ ಶಕ್ತಿ ಸಾಹಿತ್ಯಕ್ಕಿದೆ. ಹಾಗಾಗಿ ರಾಜ ಕಾರಣಿಗಳು ಹಾದಿ ತಪ್ಪದಂತೆ ಸಾಹಿತಿಗಳು ಎಚ್ಚರಿಸಬೇಕು ಎಂದು ಕಾನೂನು…
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…