ಮೈಸೂರು : ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣಕ್ಕಾಗಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಮೈಸೂರಿಗೆ ಬಂದಿಳಿದಿದ್ದಾರೆ. ಮೈಸೂರು ಸುಪ್ರಸಿದ್ಧ ಮೈಸೂರು ಪಾಕ್ ಅನ್ನು ಶಿಲ್ಪಾ ಸವಿದಿದ್ದಾರೆ. ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಅವರು ಹಂಚಿಕೊಂಡಿದ್ದಾರೆ.
ಮೊನ್ನೆಯಷ್ಟೇ ಧ್ರುವ ಸರ್ಜಾ ಹುಟ್ಟುಹಬ್ಬಕ್ಕಾಗಿ ‘ಕೆಡಿ’ ಸಿನಿಮಾ ತಂಡ ಚಿತ್ರದ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಶುಭಾಶಯ ತಿಳಿಸಿತ್ತು. ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಧ್ರುವ ಹೊಸ ರೀತಿಯ ಪಾತ್ರವನ್ನು ಮಾಡಿದ್ದಾರೆ. ಆ ಪಾತ್ರದ ಹಿನ್ನೆಲೆಯಾಗಿಟ್ಟುಕೊಂಡು ಈ ಪೋಸ್ಟರ್ ಸಿದ್ಧ ಮಾಡಿತ್ತು ಚಿತ್ರತಂಡ.
ಕ್ರಿಯೆಟಿವ್ ಡೈರೆಕ್ಟರ್ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ `ಕೆಡಿ’ ಸಿನಿಮಾದ ಫೋಟೋವೊಂದು ಈ ಹಿಂದೆ ಲೀಕ್ ಆಗಿತ್ತು. ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಾಗ, ಆ ಭಾಗದ ಶೂಟಿಂಗ್‌ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ ನಲ್ಲಿ ಕಂಡಿದ್ದರು. ಅಭಿಮಾನಿಗಳ ಮಧ್ಯ ಧ್ರುವ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ರೆಟ್ರೋ ಲುಕ್‌ನಲ್ಲಿ ಧ್ರುವ ಸಖತ್ ಆಗಿ ಕಂಡಿದ್ದರು.
ಕೆವಿಎನ್ ನಿರ್ಮಾಣದ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ರವಿಚಂದ್ರನ್ ಕೂಡ ಇದ್ದಾರೆ. ಮೊನ್ನೆಯಷ್ಟೇ ರವಿಚಂದ್ರನ್ ಅವರ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು.
ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಸಂಜಯ್ ದತ್ ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.
1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…