ಚಿತ್ರ ಮಂಜರಿ

‘ಆದಿಪುರುಷ್​’ ಟ್ರೇಲರ್​ ಬಿಡುಗಡೆ : ರಾಮನ ಪಾತ್ರದಲ್ಲಿ ಪ್ರಭಾಸ್​ ಕಂಡು ಖುಷಿಪಟ್ಟ ಸಿನಿಪ್ರಿಯರು

ಬೆಂಗಳೂರು : ಸೆಟ್ಟೇರಿದ ದಿನದಿಂದಲೂ ‘ಆದಿಪುರುಷ್​’ ಚಿತ್ರ ಸಾಕಷ್ಟು ಸದ್ದು ಮಾಡುತ್ತಲೇ ಇತ್ತು. ಈಗ ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗಿದೆ. ಜೂನ್​ 16ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಇಂದು ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಮಾಡುವ ಮೂಲಕ ಕೌತುಕ ಹೆಚ್ಚಿಸಲಾಗಿದೆ. ರಾಮಾಯಣವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ.
ರಾಮನಾಗಿ ಪ್ರಭಾಸ್​, ಸೀತೆಯಾಗಿ ಕೃತಿ ಸನೋನ್​, ರಾವಣನಾಗಿ ಸೈಫ್​ ಅಲಿ ಖಾನ್​, ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸುತ್ತಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.
‘ಟಿ ಸೀರೀಸ್‌’ನ ಭೂಷಣ್‌ ಕುಮಾರ್ ಅವರು ‘ಆದಿಪುರುಷ್​’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ತೆರೆಕಾಣಲಿದೆ. ಮೊದಲ ದಿನ ಈ ಚಿತ್ರಕ್ಕೆ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.
lokesh

Recent Posts

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

25 mins ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

59 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

4 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

4 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

4 hours ago