ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್, ಇದೀಗ ಮತ್ತೊಂದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮರಾಠಿ ಸಿನಿಮಾ ರಂಗಕ್ಕೆ ಹಾರಿದ್ದು, ಅಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಿವಾಜಿ ಮಹಾರಾಜ್ ಪಾತ್ರವನ್ನು ಅವರು ನಿರ್ವಹಿಸಲಿದ್ದು, ಇದು ಶಿವಾಜಿ ಜೀವನವನ್ನು ಆಧರಿಸಿದ ಸಿನಿಮಾವಾಗಿದೆ. ಈ ಚಿತ್ರಕ್ಕೆ ‘ವೇಡಾತ್ ಮರಾಠೆ ವೀರ್ ದೌಡಲೆ ಸಾತ್’ ಎಂದು ಹೆಸರು ಇಡಲಾಗಿದ್ದು, ಈ ಸಿನಿಮಾದ ಫಸ್ಟ್ ಲುಕ್ ನಿನ್ನೆ ಬಿಡುಗಡೆಯಾಗಿದೆ.
ಇತ್ತೀಚೆಗಷ್ಟೇ ರಿಲೀಸ್ ಆದ, ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ತಂದುಕೊಡಲಿಲ್ಲ. ಈ ಹಿಂದಿನ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ ಗೆಲ್ಲುವಲ್ಲಿ ವಿಫಲವಾದವು. ಈ ಕಾರಣದಿಂದಾಗಿಯೇ ಅವರು ಮರಾಠಿ ಸಿನಿಮಾ ರಂಗದತ್ತ ಹೊರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮೊದಲ ಪ್ರಯತ್ನದಲ್ಲೇ ಅವರು ಮರಾಠ ಸಾಮ್ರಾಜ್ಯದ ದೊರೆ ಆಗಿದ್ದ ಛತ್ರಪತಿ ಶಿವಾಜಿ ಅವರ ಜೀವನವನ್ನು ಆಧರಿಸಿದ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುತ್ತವೆ ಮೂಲಗಳು.
ಈ ಸಿನಿಮಾವನ್ನು ಮಹೇಶ್ ಮಂಜರೇಕರ್ ನಿರ್ದೇಶನ ಮಾಡುತ್ತಿದ್ದು, ವಸೀಮ್ ಖುರೇಷಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾದ ಮುಹೂರ್ತ ಕೂಡ ಆಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮತ್ತೊಂದು ವಿಶೇಷ ಅಂದರೆ, ಇದೇ ಕಾರ್ಯಕ್ರಮದಲ್ಲಿ ಎಂ.ಎನ್.ಸಿ ಮುಖ್ಯಸ್ಥ ರಾಜ್ ಠಾಕ್ರೆ ಕೂಡ ಭಾಗಿಯಾಗಿ, ಏಕನಾಥ್ ಶಿಂಧೆಗೆ ಮುಖಾಮುಖಿ ಆಗಿದ್ದಾರೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…