ಚಿತ್ರ ಮಂಜರಿ

ಮಗು ನೋಡಲು ಬರುವವರಿಗೆ ಷರತ್ತು ಹಾಕಿರುವ ಆಲಿಯಾ ದಂಪತಿ

ಬಾಲಿವುಡ್‌ ಜೋಡಿ  ಆಲಿಯಾ ಭಟ್ ಮತ್ತು ರಣಬೀರ್ ಕಪೂರ್  ಇತ್ತೀಚೆಗೆ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಮುಂಬೈನ ರಿಲಯನ್ಸ್ ಆಸ್ಪತ್ರೆಯಲ್ಲಿ ಮಗಳಿಗೆ ಜನ್ಮ ನೀಡಿದ್ದು ಈಗ ಮಗಳೊಂದಿಗೆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಅದೇ ಸಮಯದಲ್ಲಿ,  ತಂದೆ ರಣಬೀರ್ ಕಪೂರ್ ಮತ್ತೆ ಕೆಲಸಕ್ಕೆ ಮರಳಿದ್ದಾರೆ. ಈ ಮಧ್ಯೆ ಆಲಿಯಾ-ರಣಬೀರ್ ತಮ್ಮ ಮಗಳಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದೆ. ಇಂಡಸ್ಟ್ರಿಗೆ ಸಂಬಂಧಿಸಿದ ಸೆಲೆಬ್ರಿಟಿಗಳು ಮತ್ತು ಸಂಬಂಧಿಕರು  ಮಗುವನ್ನು ನೋಡಲು ತುಂಬಾ ಉತ್ಸುಕರಾಗಿದ್ದಾರೆ. ಅದಕ್ಕಾಗಿಯೇ ಮಗಳ ಆರೋಗ್ಯವನ್ನು ಪರಿಗಣಿಸಿ, ತಮ್ಮ ಮಗಳನ್ನು ನೋಡಲು ಬಯಸುವವರಿಗಾಗಿ ದಂಪತಿಗಳು   ಮಾರ್ಗಸೂಚಿಯನ್ನು ಸಹ ಸಿದ್ಧಪಡಿಸಿದ್ದಾರೆ, ಅದನ್ನು ಎಲ್ಲರೂ ಅನುಸರಿಸುವುದು ಕಡ್ಡಾಯವಾಗಿದೆ.  ಅಷ್ಟಕ್ಕೂ ಏನಿದೆ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತಾ?

ಆಲಿಯಾ ನವೆಂಬರ್ 6 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇದೀಗ ಮನೆಗೆ ಬಂದಿದ್ದಾರೆ ಈ ನಡುವೆ ಮಗಳನ್ನು ನೋಡಲು ಮನೆಗೆ ಬರುವ ಸಂಬಂಧಿಕರಿಗೆ ದಂಪತಿ ಮಾರ್ಗಸೂಚಿ ಹಾಕಿದ್ದಾರೆ.

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮಗಳ ಆರೋಗ್ಯದ ಬಗ್ಗೆ ಬಹಳ ಜಾಗೃತರಾಗಿದ್ದಾರೆ. ಅದಕ್ಕಾಗಿಯೇ ಅವರು ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಬಾಲಿವುಡ್ ಲೈಫ್ ವರದಿ ಪ್ರಕಾರ,  ದಂಪತಿಗಳು ತಮ್ಮ ಮಗಳನ್ನು ಭೇಟಿಯಾಗುವವರಿಗೆ ವಿಶೇಷ ಮಾರ್ಗಸೂಚಿ ಸೂಚಿಸಿದ್ದಾರೆ.

ದಂಪತಿಗಳು ತಮ್ಮ ಮಗಳಿಗೆ ಮನೆಯಲ್ಲಿ ಆರೋಗ್ಯಕರ ವಾತಾವರಣವನ್ನು ಒದಗಿಸಲು ಬಯಸುತ್ತಾರೆ ಮತ್ತು ತಮ್ಮ ಮನೆಗೆ ಬರುವ ಯಾವುದೇ ಆಪ್ತ ಸ್ನೇಹಿತರು ಅಥವಾ ಸಂಬಂಧಿಕರು ಮೊದಲು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ನಿರ್ಧರಿಸಿದ್ದಾರೆ. ವರದಿ ನೆಗೆಟಿವ್ ಬಂದ ನಂತರವೇ ಅವರು ತಮ್ಮ ಮನೆಗೆ ಪ್ರವೇಶಿಸಬಹುದು. ಮಗಳ ಆರೋಗ್ಯದ ಬಗ್ಗೆ ದಂಪತಿ ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳಲಾಗುತ್ತಿದೆ.

ಇದಲ್ಲದೆ, ದಂಪತಿಗಳ ಮಾರ್ಗಸೂಚಿಗೆ ಮತ್ತೊಂದು ನಿಯಮವನ್ನು ಸೇರಿಸಲಾಗಿದೆ, ಯಾರಾದರೂ ತಮ್ಮ ಮಗಳನ್ನು ಭೇಟಿ ಮಾಡಲು ಬಂದರೆ, ಅವರು ತಮ್ಮ ಫೋನ್ ಬಳಸುವಂತಿಲ್ಲ. ವಾಸ್ತವವಾಗಿ, ಆಲಿಯಾ-ರಣಬೀರ್ ತಮ್ಮ ಮಗಳ ಮುಖವನ್ನು ಬಹಿರಂಗಪಡಿಸಲು ಬಯಸುವುದಿಲ್ಲ.

ದಂಪತಿಗಳು ತಮ್ಮ ಮಗಳಿಗೆ ಮನೆಯಲ್ಲಿ ಆರೋಗ್ಯಕರ ವಾತಾವರಣವನ್ನು ಒದಗಿಸಲು ಬಯಸುತ್ತಾರೆ ಮತ್ತು ತಮ್ಮ ಮನೆಗೆ ಬರುವ ಯಾವುದೇ ಆಪ್ತ ಸ್ನೇಹಿತರು ಅಥವಾ ಸಂಬಂಧಿಕರು ಮೊದಲು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ನಿರ್ಧರಿಸಿದ್ದಾರೆ. ವರದಿ ನೆಗೆಟಿವ್ ಬಂದ ನಂತರವೇ ಅವರು ತಮ್ಮ ಮನೆಗೆ ಪ್ರವೇಶಿಸಬಹುದು. ಮಗಳ ಆರೋಗ್ಯದ ಬಗ್ಗೆ ದಂಪತಿ ಯಾವುದೇ ಚಾನ್ಸ್‌ ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳಲಾಗುತ್ತಿದೆ.

 

andolana

Recent Posts

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

30 mins ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

3 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

3 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

3 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

4 hours ago

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

4 hours ago