ಮುಂಬೈ : ಬಾಲಿವುಡ್ ಬ ಖ್ಯಾತ ನಟಿ ಆಲಿಯಾ ಭಟ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಮುಂಬೈನಲ್ಲಿರುವ ಹೆಚ್ ಎನ್ ರಿಲಯನ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಇವರು ಕಳೆದ ಏಪ್ರಿಲ್ 14ರಂದು ರಣ್ಬೀರ್ ಕಪೂರ್ ಅವರೊಟ್ಟಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
.
ಮೊದಲ ಮಗುವಿನ ಆಗಮನದ ಖುಷಿಯಲ್ಲಿ ರಾಲಿಯಾ ದಂಪ ತಿಮುಂಜಾನೆ ಮುಂಬೈನ ಹೆಚ್ ಎನ್ ರಿಲಯನ್ಸ್ ಆಸ್ಪತ್ರೆಗೆ ರಾಲಿಯಾ ಕಪಲ್ ಮತ್ತು ಕುಟುಂಬಸ್ಥರು ತಲುಪಿದ್ದರು. ಇಂದೇ ಮಗುವಾಗುವ ನಿರೀಕ್ಷೆಯಿತ್ತು. ಅದರಂತೆ ಇದೀಗ ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ. ಅಭಿಮಾನಿಗಳು ಕೂಡ ಈ ಬಗ್ಗೆ ಸಂತಸ ವ್ಯಕ್ತಪಡಿಸಿ ಶುಭಾಶಯ ತಿಳಿಸುತ್ತಿದ್ದಾರೆ.





