ಚೆನ್ನೈ: ತಮಿಳಿನ ಬಹುದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ʼಲೈಕಾ ಪ್ರೊಡಕ್ಷನ್ಸ್ʼ ಸಂಸ್ಥೆಗೆ ಸೇರಿದ ವಿವಿಧ ಸ್ಥಳಕ್ಕೆ ಇ.ಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ಲೈಕಾ ಪ್ರೊಡಕ್ಷನ್ಸ್ ಹೌಸ್ ಸಂಸ್ಥೆ ಮೇಲೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿಈ ದಾಳಿಯನ್ನು ನಡೆಸಲಾಗಿದೆ ಎಂದು ವರದಿಯಾಗಿದೆ.
ಸಿನಿಮಾ ನಿರ್ಮಾಣ ಸಂಸ್ಥೆಗೆ ಸೇರಿದ ಚೆನ್ನೈನ 8 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಅಧಿಕಾರಿಗಳು ಇದಕ್ಕೆ ಸಂಬಂಧಪಟ್ಟ ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದಾಳಿಯ ಬಗ್ಗೆ ಲೈಕಾ ಪ್ರೊಡಕ್ಷನ್ಸ್ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.
ತಮಿಳು ಸಿನಿಮಾರಂಗದಲ್ಲಿ ಬಹುದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆಯಾಗಿರುವ ʼಲೈಕಾ ಪ್ರೊಡಕ್ಷನ್ಸ್ʼ ಬಹುಕೋಟಿ ನಿರ್ಮಾಣದ ರಜಿನಿಕಾಂತ್ ಅವರ ʼ2.0ʼ, ‘ದರ್ಬಾರ್’ ಸಿನಿಮಾಕ್ಕೆ ಬಂಡವಾಳ ಹಾಕಿದೆ. ಹಿಂದಿಯಲ್ಲಿ ಜಾಹ್ನವಿ ಕಪೂರ್ ಅವರ ʼ ಗುಡ್ ಲಕ್ ಜೆರ್ರಿʼ ಅಕ್ಷಯ್ ಕುಮಾರ್ ಅವರ ʼರಾಮ್ ಸೇತುʼ ಸಿನಿಮಾವನ್ನು ನಿರ್ಮಾಣ ಮಾಡಿದೆ.
ಇತ್ತೀಚೆಗೆ ಬಂದ ಮಣಿರತ್ನಂ ಅವರ ʼ ಪೊನ್ನಿಯಿನ್ ಸೆಲ್ವನ್ʼ 1,2ʼ ಸಿನಿಮಾವನ್ನು ನಿರ್ಮಾಣ ಮಾಡಿದೆ. ಸದ್ಯ ರಜಿನಿಕಾಂತ್ ಪುತ್ರಿ ‘ಲಾಲ್ ಸಲಾಂʼ ಸಿನಿಮಾಕ್ಕೆ ಬಂಡವಾಳ ಹಾಕಿದೆ.
ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…