ಗಿರೀಶ್ ಕಾಸರವಳ್ಳಿ, ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ನಿರ್ದೇಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ನಿರ್ದೇಶನದ ‘ಅಮರ ಪ್ರೇಮಿ ಅರುಣ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಡಾ.ಮಂಜಮ್ಮ ಜೋಗತಿ ಹಾಗೂ ಡಿ ಬೀಟ್ಸ್ ಸಂಸ್ಥೆಯ ಶೈಲಜಾ ನಾಗ್ ಇಬ್ಬರೂ ಜೊತೆಗೂಡಿ ಚಿತ್ರದ ಮೊದಲ ನೋಟ ಹಾಗೂ ಟೀಸರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದ್ದಾರೆ. ಒಲವು ಸಿನಿಮಾಸ್ ಬ್ಯಾನರ್ ಅಡಿ ಸಮಾನ ಮನಸ್ಕರು ಸೇರಿ ನಿರ್ಮಿಸಿರುವ ಈ ಚಿತ್ರದಲ್ಲಿ ಮಂಜಮ್ಮ ಜೋಗತಿ ವಿಶೇಷ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.
‘ಅಮರ ಪ್ರೇಮಿ ಅರುಣ್’ ಬಳ್ಳಾರಿಯಲ್ಲಿ ನಡೆಯುವ ಪ್ರೇಮ ಕಥೆ. ಬಳ್ಳಾರಿ ಹಾಗೂ ಸುತ್ತ ಮುತ್ತಲಿನಲ್ಲೇ ಚಿತ್ರಕ್ಕೆ ೫೪ ದಿನಗಳ ಚಿತ್ರೀಕರಣ ನಡೆದಿದೆ. ಸಂಭಾಷಣೆ ಕೂಡ ಬಳ್ಳಾರಿ ಭಾಷೆಯಲ್ಲೇ ಇರುತ್ತದೆ. ನಾಯಕ ಹರಿ ಶವಾರ್ ಅರುಣ್ ಎಂಬ ಪಾತ್ರದಲ್ಲಿ ಹಾಗೂ ನಾಯಕಿ ದೀಪಿಕಾ ಆರಾಧ್ಯ ಕಾವ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಧರ್ಮಣ್ಣ ಕಡೂರು ಅವರದು ಬಳ್ಳಾರಿ ಸೀನ ಎಂಬ ಪಾತ್ರ. ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಪ್ರವೀಣ್ ಕುಮಾರ್, ‘ಇದೊಂದು ಕೌಟುಂಬಿಕ ಚಿತ್ರವೂ ಹೌದು. ನಾಯಕ ಹಾಗೂ ನಾಯಕಿಗೆ ಅಪ್ಪ, ಅಮ್ಮ, ಅಜ್ಜಿ ಎಲ್ಲರೂ ಇರುತ್ತಾರೆ. ಈ ಪಾತ್ರಗಳಿಗೆ ಹಿರಿಯ ಕಲಾವಿದರು ಜೀವ ತುಂಬಿದ್ದಾರೆ. ಪ್ರವೀಣ್ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಏಪ್ರಿಲ್‌ನಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದು ತಿಳಿಸಿದರು. ನಾಯಕ ನಟ ಹರಿ ಶವಾರ್ ಮಾತನಾಡಿ, ‘ಕಹಿ’ ಸಿನಿಮಾದಲ್ಲಿ ಅಭಿನಯಿಸಿದ್ದ ನಾನು ಈ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿದ್ದೇನೆ ಎಂದರು. ಚಿತ್ರದಲ್ಲಿ ಆರು ಹಾಡುಗಳಿವೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರವೀಣ್‌ಕುಮಾರ್ ಹಾಡುಗಳನ್ನು ಬರೆದಿದ್ದಾರೆ
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…