ಗಿರೀಶ್ ಕಾಸರವಳ್ಳಿ, ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ನಿರ್ದೇಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ನಿರ್ದೇಶನದ ‘ಅಮರ ಪ್ರೇಮಿ ಅರುಣ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಡಾ.ಮಂಜಮ್ಮ ಜೋಗತಿ ಹಾಗೂ ಡಿ ಬೀಟ್ಸ್ ಸಂಸ್ಥೆಯ ಶೈಲಜಾ ನಾಗ್ ಇಬ್ಬರೂ ಜೊತೆಗೂಡಿ ಚಿತ್ರದ ಮೊದಲ ನೋಟ ಹಾಗೂ ಟೀಸರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದ್ದಾರೆ. ಒಲವು ಸಿನಿಮಾಸ್ ಬ್ಯಾನರ್ ಅಡಿ ಸಮಾನ ಮನಸ್ಕರು ಸೇರಿ ನಿರ್ಮಿಸಿರುವ ಈ ಚಿತ್ರದಲ್ಲಿ ಮಂಜಮ್ಮ ಜೋಗತಿ ವಿಶೇಷ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ.

‘ಅಮರ ಪ್ರೇಮಿ ಅರುಣ್’ ಬಳ್ಳಾರಿಯಲ್ಲಿ ನಡೆಯುವ ಪ್ರೇಮ ಕಥೆ. ಬಳ್ಳಾರಿ ಹಾಗೂ ಸುತ್ತ ಮುತ್ತಲಿನಲ್ಲೇ ಚಿತ್ರಕ್ಕೆ ೫೪ ದಿನಗಳ ಚಿತ್ರೀಕರಣ ನಡೆದಿದೆ. ಸಂಭಾಷಣೆ ಕೂಡ ಬಳ್ಳಾರಿ ಭಾಷೆಯಲ್ಲೇ ಇರುತ್ತದೆ. ನಾಯಕ ಹರಿ ಶವಾರ್ ಅರುಣ್ ಎಂಬ ಪಾತ್ರದಲ್ಲಿ ಹಾಗೂ ನಾಯಕಿ ದೀಪಿಕಾ ಆರಾಧ್ಯ ಕಾವ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಧರ್ಮಣ್ಣ ಕಡೂರು ಅವರದು ಬಳ್ಳಾರಿ ಸೀನ ಎಂಬ ಪಾತ್ರ. ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಪ್ರವೀಣ್ ಕುಮಾರ್, ‘ಇದೊಂದು ಕೌಟುಂಬಿಕ ಚಿತ್ರವೂ ಹೌದು. ನಾಯಕ ಹಾಗೂ ನಾಯಕಿಗೆ ಅಪ್ಪ, ಅಮ್ಮ, ಅಜ್ಜಿ ಎಲ್ಲರೂ ಇರುತ್ತಾರೆ. ಈ ಪಾತ್ರಗಳಿಗೆ ಹಿರಿಯ ಕಲಾವಿದರು ಜೀವ ತುಂಬಿದ್ದಾರೆ. ಪ್ರವೀಣ್ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಏಪ್ರಿಲ್‌ನಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದು ತಿಳಿಸಿದರು. ನಾಯಕ ನಟ ಹರಿ ಶವಾರ್ ಮಾತನಾಡಿ, ‘ಕಹಿ’ ಸಿನಿಮಾದಲ್ಲಿ ಅಭಿನಯಿಸಿದ್ದ ನಾನು ಈ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿದ್ದೇನೆ ಎಂದರು. ಚಿತ್ರದಲ್ಲಿ ಆರು ಹಾಡುಗಳಿವೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರವೀಣ್‌ಕುಮಾರ್ ಹಾಡುಗಳನ್ನು ಬರೆದಿದ್ದಾರೆ

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago