ಚಿತ್ರ ಮಂಜರಿ

ಪ್ರಿಯಕರನೊಟ್ಟಿಗೆ ನಿಶ್ಚಿತಾರ್ಥ ಮಾಡಿಕೊಂಡಿ ಅಮೀರ್​ ಖಾನ್​ ಪುತ್ರಿ

ಮುಂಬೈ: ಬಾಲಿವುಡ್​ನ ಸ್ಟಾರ್​ ನಟ ಅಮೀರ್​ ಖಾನ್​ ಅವರ ಪುತ್ರಿ ಐರಾ ಖಾನ್​ ಅವರು ಪ್ರಿಯಕರ ನುಪೂರ್​ ಶಿಖರೆ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಕುರಿತು ಜೋಡಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಐರಾ ಮತ್ತು ನುಪೂರ್ ಶಿಖರೆ ಕಳೆದ ಎರಡು ವರ್ಷಗಳಿಂದ ಡೇಟಿಂಗ್​ ನಡೆಸುತ್ತಿದ್ದು, ಇಂದು ಇನ್​ಸ್ಟಾಗ್ರಾಮ್​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ನುಪೂರ್​ ಶಿಖರೆ ಪ್ರಪೋಸ್​ ಮಾಡುತ್ತಿರುವ ವಿಡಿಯೋ ತುಣುಕಿನ ಪೋಸ್ಟ್ ಅ​ನ್ನು ಐರಾ ಹಂಚಿಕೊಂಡಿದ್ದಾರೆ.
ಸೈಕಲಿಂಗ್​ ಕಾರ್ಯಕ್ರಮದಲ್ಲಿ ಪ್ರಿಯಕರ ನುಪೂರ್​ ಶಿಖರೆ ಸಿನಿಮಾ ಶೈಲಿಯಲ್ಲಿ ಐರಾ ಅವರಿಗೆ ಉಂಗುರ ನೀಡಿ, ನೀನು ನನ್ನ ಮದುವೆ ಆಗುವೆಯಾ ಎಂದು ಪ್ರಸ್ತಾಪಿಸಿದಾಗ ಐರಾ ಹೌದು ಎಂದು ಶಿಖರೆಗೆ ಚುಂಬಿಸಿ ಒಪ್ಪಿಗೆ ನೀಡುತ್ತಿರುವ ವಿಡಿಯೋ ತುಣುಕನ್ನು ಐರಾ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪೋಸ್ಟ್​ಗೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದವರು ಮೆಚ್ಚುಗೆ ವ್ಯಕ್ತಪಡಿಸಿ ಜೋಡಿಗಳಿಗೆ ಶುಭಹಾರೈಸಿದ್ದಾರೆ. ನಟ ಅಮೀರ್​ ಖಾನ್​ ಐರಾ ಮತ್ತು ಮೊದಲ ಪತ್ನಿ ರೀನಾ ಜೊತೆಗಿರುವ ಪೋಸ್ಟ್ ಹಂಚಿಕೊಂಡಿದ್ದಾರೆ. ಇನ್ನು ಮೊದಲ ಪತ್ನಿಯ ಮಗಳೇ ಐರಾ ಆಗಿದ್ದು, 2002 ರಲ್ಲಿ ಅಮೀರ್​ ಖಾನ್​ ರೀನಾ ದಂಪತಿ ವಿಚ್ಚೇದನ ಪಡೆದುಕೊಂಡಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago