ಕಳೆದ ವಾರವಷ್ಟೇ ತೆಲುಗು ನಿರ್ದೇಶಕ ಸಂದೀಪ್ ರೆಡ್ಡಿ ವಾಂಗ ನಿರ್ದೇಶನದ ಬಾಲಿವುಡ್ ಚಿತ್ರ ಅನಿಮಲ್ ತೆರೆಗೆ ಬಂದಿದೆ. ಬಿಡುಗಡೆಗೂ ಮುನ್ನ ತನ್ನ ಟ್ರೈಲರ್ ಹಾಗೂ ಪೋಸ್ಟರ್‌ಗಳಿಂದ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಅನಿಮಲ್ ಬಿಡುಗಡೆ ನಂತರ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ.
ಬಿಡುಗಡೆ ದಿನ ಹೆಚ್ಚು ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡು ಸಾಧಾರಣ ಯಶಸ್ಸು ಗಳಿಸಬಹುದು ಎನಿಸಿಕೊಂಡಿದ್ದ ಅನಿಮಲ್ ಸಿನಿಮಾ ನಿರೀಕ್ಷೆಗೂ ಮೀರಿ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಸದ್ಯ ನಿನ್ನೆಗೆ ( ಡಿಸೆಂಬರ್ 5 ) 5 ದಿನಗಳ ಓಟವನ್ನು ಪೂರೈಸಿರುವ ಅನಿಮಲ್ ಚಿತ್ರ ವಿಶ್ವ ಬಾಕ್ಸ್ ಆಫೀಸ್‌ನಲ್ಲಿ 481 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಅನ್ನು ಮಾಡಿದೆ. ಅಲ್ಲದೇ ಭಾರತ ಬಾಕ್ಸ್ ಆಫೀಸ್‌ನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಎ ಸರ್ಟಿಫೈಡ್ ಚಿತ್ರ ಎಂಬ ದಾಖಲೆಯನ್ನೂ ಸಹ ಅನಿಮಲ್ ನಿರ್ಮಿಸಿದೆ.
ಭಾರತದಲ್ಲಿ ಅತಿಹೆಚ್ಚು ಗಳಿಸಿದ ಎ ಸರ್ಟಿಫೈಡ್ ಚಿತ್ರಗಳ ಟಾಪ್ 5 ಪಟ್ಟಿ:
1. ಅನಿಮಲ್ – 284.05 ಕೋಟಿ ( 5 ದಿನಗಳಲ್ಲಿ )
2. ಕಬೀರ್ ಸಿಂಗ್ – 278 ಕೋಟಿ
3. ದ ಕಾಶ್ಮೀರ್ ಫೈಲ್ಸ್ – 252 ಕೋಟಿ
4. ದ ಕೇರಳ ಸ್ಟೋರಿ – 242 ಕೋಟಿ
5. ಓ ಮೈ ಗಾಡ್ 2 – 150 ಕೋಟಿ
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…