ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ.
ಅಕ್ಟೋಬರ್ 28, 2022 ರಂದು ದೊಡ್ಡತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಈ ಸಿನಿಮಾದ ಟ್ರೈಲರ್ ನೋಡಿದ ಅಭಿಮಾನಿಗಳು ಬಹಳ ಸಂತಸ ಪಟ್ಟಿದ್ದಾರೆ.
. ‘ಕರ್ನಾಟಕದ ಕಾಡು ಉಳಿಸಿ’ ಎಂಬ ಡಾ. ರಾಜ್ ಸಂದೇಶದ ಮರುಜನ್ಮವೇ ಹೊಸ ಗಂಧದ ಗುಡಿ ಸಾರಾಂಶ. ನದಿ, ಬೆಟ್ಟ, ಮರ, ಗಿಡ, ಪ್ರಾಣಿ-ಪಕ್ಷಿಗಳ ನೋಟವನ್ನು ಅತ್ಯದ್ಭುತವಾಗಿ ನೈಜವಾಗಿ ಸೆರೆ ಹಿಡಿಯಲಾಗಿದೆ.
ಗಂಧದ ಗುಡಿ ಸಿನಿಮಾ ಪ್ರಕೃತಿಯತ್ತ ಒಂದು ಪಯಣ. ನಿಜವಾದ ನಾಯಕನ ಮತ್ತು ಪ್ರಕೃತಿ ಕಾಳಜಿಯ ಕಥೆ. ಬಯಲು ಸೀಮೆಯಿಂದ ಹಿಡಿದು ಸಮುದ್ರ ತೀರದವರೆಗೂ, ಪತನವಾಗಿರುವ ಕಾಡುಗಳಿಂದ, ಪಶ್ಚಿಮ ಘಟ್ಟ, ದಟ್ಟ ಅರಣ್ಯದವರೆಗೂ ಈ ಮಣ್ಣಿನ ಸಿರಿ ಸೆರೆ ಹಿಡಿದಿರುವ ಸಿನಿಮಾ ಇದು. ಪ್ರಕೃತಿಯ ಸಿರಿವಂತಿಕೆಯನ್ನು ಹಾಡುಗಳೊಂದಿಗೆ, ದೃಶ್ಯ ವೈಭವದೊಂದಿಗೆ ಜನರಿಗೆ ಪರಿಚಯಿಸುವ ಉತ್ಸಾಹವನ್ನು ಪುನೀತ್ ರಾಜ್ಕುಮಾರ್ ಮಾಡಿದ್ದಾರೆ. ವನ್ಯಜೀವಿಗಳ ಬದುಕು, ಕಾಡಿನ ಸಂರಕ್ಷಣೆ, ಜನ ಸಾಮಾನ್ಯರಿಗೆ ಕಾಡಿನ ಬಗ್ಗೆ ಉತ್ಸಾಹ ಹಾಗೂ ಕಾಳಜಿಯನ್ನು ಹೆಚ್ಚಿಸಲು ಪ್ರಯತ್ನಿಸಿ, ನಮ್ಮ ವ್ಯಕ್ತಿತ್ವದ ಮೇಲೆ ಮಹತ್ತರವಾದ ಬದಲಾವಣೆಯನ್ನು ತರಲು ಅಪ್ಪು ಹೊರಟಿದ್ದರು.ಆದರೆ ಅವರ ಅಕಾಲಿಕ ನಿಧನದಿಂದ ಆ ಕನಸು ಹಾಗೇ ಉಳಿದಿದೆ. ಇಂದು ಅವರ ನೆನಪಿನಲ್ಲಿ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ತಿಂಗಳಾಂತ್ಯದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.
ಹೌದು, ಈ ವರ್ಷದ ನಾಡಹಬ್ಬ ರಾಜ್ಯೋತ್ಸವವನ್ನು ಅಪ್ಪುವಿನ ಗಂಧದ ಗುಡಿಯೊಂದಿಗೆ ಆಚರಿಸಲು ಮುಹೂರ್ತ ಫಿಕ್ಸ್ ಆಗಿದೆ.
ರಾಷ್ಟ್ರ ಪ್ರಶಸ್ತಿ ಪಡೆದ ವನ್ಯಜೀವಿ ಚಿತ್ರ ನಿರ್ದೇಶಕ ಅಮೋಘವರ್ಷ ನಿರ್ದೇಶನದ ಚಲನಚಿತ್ರ ಇದಾಗಿದೆ. ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ 2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.
ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್‌ಲೈನ್ ಡೆಲಿವರಿ ಬಾಯ್ಸ್ ವೇಷದಲ್ಲಿ…
ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…
ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ…
ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ…
ಹಾಸನ: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ…
ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.…