ಚಿತ್ರ ಮಂಜರಿ

ಅಪ್ಪು ಕೊನೆಯ ಚಿತ್ರ ʼಗಂಧದಗುಡಿʼ ಟ್ರೈಲರ್ ಬಿಡುಗಡೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ.

ಅಕ್ಟೋಬರ್ 28, 2022 ರಂದು ದೊಡ್ಡತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಈ ಸಿನಿಮಾದ ಟ್ರೈಲರ್ ನೋಡಿದ ಅಭಿಮಾನಿಗಳು ಬಹಳ ಸಂತಸ ಪಟ್ಟಿದ್ದಾರೆ.


. ‘ಕರ್ನಾಟಕದ ಕಾಡು ಉಳಿಸಿ’ ಎಂಬ ಡಾ. ರಾಜ್ ಸಂದೇಶದ ಮರುಜನ್ಮವೇ ಹೊಸ ಗಂಧದ ಗುಡಿ ಸಾರಾಂಶ. ನದಿ, ಬೆಟ್ಟ, ಮರ, ಗಿಡ, ಪ್ರಾಣಿ-ಪಕ್ಷಿಗಳ ನೋಟವನ್ನು ಅತ್ಯದ್ಭುತವಾಗಿ ನೈಜವಾಗಿ ಸೆರೆ ಹಿಡಿಯಲಾಗಿದೆ.

ಗಂಧದ ಗುಡಿ ಸಿನಿಮಾ ಪ್ರಕೃತಿಯತ್ತ ಒಂದು ಪಯಣ. ನಿಜವಾದ ನಾಯಕನ ಮತ್ತು ಪ್ರಕೃತಿ ಕಾಳಜಿಯ ಕಥೆ. ಬಯಲು ಸೀಮೆಯಿಂದ ಹಿಡಿದು ಸಮುದ್ರ ತೀರದವರೆಗೂ, ಪತನವಾಗಿರುವ ಕಾಡುಗಳಿಂದ, ಪಶ್ಚಿಮ ಘಟ್ಟ, ದಟ್ಟ ಅರಣ್ಯದವರೆಗೂ ಈ ಮಣ್ಣಿನ ಸಿರಿ ಸೆರೆ ಹಿಡಿದಿರುವ ಸಿನಿಮಾ ಇದು. ಪ್ರಕೃತಿಯ ಸಿರಿವಂತಿಕೆಯನ್ನು ಹಾಡುಗಳೊಂದಿಗೆ, ದೃಶ್ಯ ವೈಭವದೊಂದಿಗೆ ಜನರಿಗೆ ಪರಿಚಯಿಸುವ ಉತ್ಸಾಹವನ್ನು ಪುನೀತ್ ರಾಜ್​ಕುಮಾರ್ ಮಾಡಿದ್ದಾರೆ. ವನ್ಯಜೀವಿಗಳ ಬದುಕು, ಕಾಡಿನ ಸಂರಕ್ಷಣೆ, ಜನ ಸಾಮಾನ್ಯರಿಗೆ ಕಾಡಿನ ಬಗ್ಗೆ ಉತ್ಸಾಹ ಹಾಗೂ ಕಾಳಜಿಯನ್ನು ಹೆಚ್ಚಿಸಲು ಪ್ರಯತ್ನಿಸಿ, ನಮ್ಮ ವ್ಯಕ್ತಿತ್ವದ ಮೇಲೆ ಮಹತ್ತರವಾದ ಬದಲಾವಣೆಯನ್ನು ತರಲು ಅಪ್ಪು ಹೊರಟಿದ್ದರು.ಆದರೆ ಅವರ ಅಕಾಲಿಕ ನಿಧನದಿಂದ ಆ ಕನಸು ಹಾಗೇ ಉಳಿದಿದೆ. ಇಂದು ಅವರ ನೆನಪಿನಲ್ಲಿ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ತಿಂಗಳಾಂತ್ಯದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.


ಹೌದು, ಈ ವರ್ಷದ ನಾಡಹಬ್ಬ ರಾಜ್ಯೋತ್ಸವವನ್ನು ಅಪ್ಪುವಿನ ಗಂಧದ ಗುಡಿಯೊಂದಿಗೆ ಆಚರಿಸಲು ಮುಹೂರ್ತ ಫಿಕ್ಸ್ ಆಗಿದೆ.

ರಾಷ್ಟ್ರ ಪ್ರಶಸ್ತಿ ಪಡೆದ ವನ್ಯಜೀವಿ ಚಿತ್ರ ನಿರ್ದೇಶಕ ಅಮೋಘವರ್ಷ ನಿರ್ದೇಶನದ ಚಲನಚಿತ್ರ ಇದಾಗಿದೆ. ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ 2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

andolanait

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

2 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

2 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

2 hours ago