Mysore
23
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಬಹುಕಾಲದ ಗೆಳತಿ ಆಶ್ನಾ ಶ್ರಾಫ್ ಜೊತೆ ಅರ್ಮಾನ್ ಮಲಿಕ್ ಎಂಗೇಜ್‌

ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ತಮ್ಮ ಸುಮಧುರ ಹಾಡಿನ ಮೂಲಕ ಮೋಡಿ ಮಾಡುತ್ತಿರುವ ಸಿಂಗರ್ ಅರ್ಮಾನ್ ಮಲಿಕ್ ಎಂಗೇಜ್ ಆಗಿದ್ದಾರೆ. ಬಹುಕಾಲದ ಗೆಳತಿ ಆಶ್ನಾ ಶ್ರಾಫ್ ಜೊತೆ ಇಂದು ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಫೋಟೋಗಳನ್ನ ಸಿಂಗರ್ ಅರ್ಮಾನ್ ಹಂಚಿಕೊಂಡಿದ್ದಾರೆ.

ಸಾಕಷ್ಟು ಸಮಯದಿಂದ ಆಶ್ನಾ- ಅರ್ಮಾನ್ ಡೇಟಿಂಗ್ ಮಾಡುತ್ತಿದ್ದರು. ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಈ ಜೋಡಿ ಎಂಗೇಜ್ ಆಗಿದ್ದಾರೆ. ಸೋಷಿಯಲ್‌ ಮೀಡಿಯಾ ಸ್ಟಾರ್‌ ಆಶ್ನಾ ಜೊತೆಗೆ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.

ಗೆಳತಿ ಆಶ್ನಾಗೆ ಮಂಡಿಯೂರಿ ಬೆರಳಿಗೆ ಉಂಗುರ ತೊಡಿಸುತ್ತಿರುವ ಅರ್ಮಾನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಸ್ವತಃ ಸಿಂಗರ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಎಂಗೇಜ್‌ಮೆಂಟ್ ಫೋಟೋ ಶೇರ್ ಮಾಡುವ ಮೂಲಕ ಸಿಹಿಸುದ್ದಿ ನೀಡಿದ್ದಾರೆ.

ಮುಂಗಾರು ಮಳೆ 2 ಚಿತ್ರದ ಸರಿಯಾಗಿ ನೆನಪಿದೆ ನನಗೆ ಸಾಂಗ್, ಚಕ್ರವರ್ತಿ ಚಿತ್ರದ ಒಂದು ಮಳೆಬಿಲ್ಲು, ಎಕ್ ಲವ್ ಯಾ ಚಿತ್ರದ ಯಾರೇ ಯಾರೇ ಸಾಂಗ್ ಸೇರಿದಂತೆ ಕನ್ನಡದ ಸಾಕಷ್ಟು ಹಾಡುಗಳಿಗೆ ಅರ್ಮಾನ್ ಧ್ವನಿಯಾಗಿದ್ದಾರೆ. ಹಲವು ಸೂಪರ್ ಹಿಟ್ ಸಾಂಗ್‌ಗಳನ್ನ ಅರ್ಮಾನ್ ಮಲಿಕ್ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!