ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ತಮ್ಮ ಸುಮಧುರ ಹಾಡಿನ ಮೂಲಕ ಮೋಡಿ ಮಾಡುತ್ತಿರುವ ಸಿಂಗರ್ ಅರ್ಮಾನ್ ಮಲಿಕ್ ಎಂಗೇಜ್ ಆಗಿದ್ದಾರೆ. ಬಹುಕಾಲದ ಗೆಳತಿ ಆಶ್ನಾ ಶ್ರಾಫ್ ಜೊತೆ ಇಂದು ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಫೋಟೋಗಳನ್ನ ಸಿಂಗರ್ ಅರ್ಮಾನ್ ಹಂಚಿಕೊಂಡಿದ್ದಾರೆ.
ಸಾಕಷ್ಟು ಸಮಯದಿಂದ ಆಶ್ನಾ- ಅರ್ಮಾನ್ ಡೇಟಿಂಗ್ ಮಾಡುತ್ತಿದ್ದರು. ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಈ ಜೋಡಿ ಎಂಗೇಜ್ ಆಗಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಆಶ್ನಾ ಜೊತೆಗೆ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.
ಗೆಳತಿ ಆಶ್ನಾಗೆ ಮಂಡಿಯೂರಿ ಬೆರಳಿಗೆ ಉಂಗುರ ತೊಡಿಸುತ್ತಿರುವ ಅರ್ಮಾನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಸ್ವತಃ ಸಿಂಗರ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಎಂಗೇಜ್‌ಮೆಂಟ್ ಫೋಟೋ ಶೇರ್ ಮಾಡುವ ಮೂಲಕ ಸಿಹಿಸುದ್ದಿ ನೀಡಿದ್ದಾರೆ.
ಮುಂಗಾರು ಮಳೆ 2 ಚಿತ್ರದ ಸರಿಯಾಗಿ ನೆನಪಿದೆ ನನಗೆ ಸಾಂಗ್, ಚಕ್ರವರ್ತಿ ಚಿತ್ರದ ಒಂದು ಮಳೆಬಿಲ್ಲು, ಎಕ್ ಲವ್ ಯಾ ಚಿತ್ರದ ಯಾರೇ ಯಾರೇ ಸಾಂಗ್ ಸೇರಿದಂತೆ ಕನ್ನಡದ ಸಾಕಷ್ಟು ಹಾಡುಗಳಿಗೆ ಅರ್ಮಾನ್ ಧ್ವನಿಯಾಗಿದ್ದಾರೆ. ಹಲವು ಸೂಪರ್ ಹಿಟ್ ಸಾಂಗ್‌ಗಳನ್ನ ಅರ್ಮಾನ್ ಮಲಿಕ್ ನೀಡಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…
ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…
ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…
ಮುಂಬೈ : ಐಪಿಎಲ್ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…