ತಮಿಳುನಾಡು : ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ ಆವರಣದಲ್ಲಿ ಫೆ.20ರ ಬೆಳಗ್ಗೆ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ತೆಲುಗು ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ ಅವರು ಬೆಂಗಳೂರಿನಲ್ಲಿ ಶನಿವಾರ (ಫೆ.18) ಕೊನೆಯುಸಿರು ಎಳೆದಿದ್ದು ತೀವ್ರ ನೋವಿನ ಸಂಗತಿ. ಹಲವು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಭಾನುವಾರ (ಫೆ.19) ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರವನ್ನು ರಂಗಾ ರೆಡ್ಡಿ ಜಿಲ್ಲೆಯ ಮೋಕಿಲಾಗೆ ರವಾನೆ ಮಾಡಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ (ಫೆ.20) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ನಂದಮೂರಿ ತಾರಕ ರತ್ನ ಅಂತ್ಯಕ್ರಿಯೆ ನಡೆಯಲಿದೆ.
ಫೆ.20ರ ಬೆಳಗ್ಗೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ ಆವರಣದಲ್ಲಿ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಅಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ಬೆಳಗ್ಗೆ 7 ಗಂಟೆಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಅಂದು ಸಂಜೆ 5 ಗಂಟೆ ಸುಮಾರಿಗೆ ಹೈದರಾಬಾದ್ನ ಮಹಾಪ್ರಸ್ತಾನಂನಲ್ಲಿ ಅಂತ್ಯಕ್ರಿಯೆ ಮಾಡಲಾಗುವುದು.