ಚಿತ್ರ ಮಂಜರಿ

ಅವತಾರ ಪುರುಷನ ತ್ರಿಷಂಕು ಪಯಣ ಆರಂಭ ಯಾವಾಗ ಗೊತ್ತಾ?

ಕನ್ನಡದ ಪ್ರಾಮಿಸಿಂಗ್‌ ಡೈರೆಕ್ಟರ್‌ ಸಿಂಪಲ್‌ ಸುನಿ ಅವರ ನಿರ್ದೇಶನದ ಅವತಾರ ಪುರುಷ ಚಿತ್ರದ 2ನೇ ಭಾಗ ರಿಲೀಸ್‌ ಆಗಲಿದ್ದು, ಈ ಬಗ್ಗೆ ಸ್ವತಃ ನಿರ್ದೇಶಕರೇ ಅಪ್‌ಡೇಟ್‌ ನೀಡಿದ್ದಾರೆ.

2022 ರ ಮೇ ನಲ್ಲಿ ತೆರೆಕಂಡ ನಟ ಶರಣ್‌ ಅಭಿನಯದ ಅವತಾರ ಪುರುಷ ಚಿತ್ರ ಭಾರೀ ಮೆಚ್ಚುಗೆ ಪಡೆದಿತ್ತು. ಇದೀಗ ಎರಡು ವರ್ಷಗಳ ಕಾಯುವಿಕೆಯ ನಂತರ ಈ ಚಿತ್ರದ ಎರಡನೇ ಭಾಗ ರಿಲೀಸ್‌ ಆಗುತ್ತಿದೆ. ಇದರ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ.

ಬರೀ ಲವ್‌ ಸ್ಟೋರಿಗಳ ಮೂಲಕವೇ ಹೆಚ್ಚು ಜನಮನ ಗೆದ್ದ ಸುನಿ ಅವರು, ಒಂದು ವಿಭಿನ್ನ ಕಥೆಯ ಮೂಲಕ ಹಾಸ್ಯದಲ್ಲಿಯೇ ಮಾಟ-ಮಂತ್ರವನ್ನು ತೋರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ಹಲವಾರು ಟ್ವಿಸ್ಟ್‌ಗಳೊಂದಿಗೆ ಮೊದಲನೇ ಭಾಗವನ್ನು ಮುಗಿಸಿದ್ದ ಇವರು, ಎಲ್ಲದಕ್ಕೂ ಈ ಉತ್ತರ ನೀಡಲು ಬಂದಿದ್ದಾರೆ.

ಅಂದಹಾಗೆ ಸುನೀ ಅವರು ಇದೇ ಮಾರ್ಚ್‌ 22 ರಂದು ಅವತಾರ ಪುರುಷ-2 ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು ʼಕಾಯುವಿಕೆಯ ಅಂತ್ಯ, ಹೊಸಯುಗದ ಅನಾವರಣʼ ಎಂದು ಬರೆದುಕೊಂಡಿದ್ದಾರೆ.

ಪುಷ್ಕರ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಟನಾಗಿ ಶರಣ್‌, ನಾಯಕಿಯಾಗಿ ಆಶಿಕಾ ರಂಗನಾಥ್‌, ಶ್ರೀನಗರ ಕಿಟ್ಟಿ, ಸಾಯ್‌ ಕುಮಾರ್‌ ಸೇರಿದಂತೆ ಹಲವು ನಟರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಪುಷ್ಕರ್‌ ಮಲ್ಲಿಕಾರ್ಜುನಯ್ಯ ಹಣ ಹೂಡಿದರೆ, ಸುನಿ ಆಕ್ಷನ್‌ ಕಟ್‌ ಹೇಳಿದ್ದಾರೆ.

andolana

Recent Posts

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

38 seconds ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

8 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

14 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago