೨೦೧೮ರಲ್ಲಿ ‘ಅಯೋಗ್ಯ’ ಚಿತ್ರ ಬಿಡುಗಡೆಯಾಗಿತ್ತು. ಸತೀಶ್ ನೀನಾಸಂ, ರಚಿತಾ ರಾಮ್, ರವಿಶಂಕರ್ ಮುಂತಾದವರು ನಟಿಸಿದ್ದ ಚಿತ್ರ ಯಶಸ್ವಿಯಾಗಿದ್ದಷ್ಟೇ ಅಲ್ಲ, ೪೦ ಕೇಂದ್ರಗಳಲ್ಲಿ ೧೦೦ ದಿನಗಳ ಪ್ರದರ್ಶನ ಕಂಡಿತ್ತು. ಈಗ ‘ಅಯೋಗ್ಯ’ ಚಿತ್ರದ ಮುಂದುವರಿದ ಭಾಗಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದೆ. ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದ್ದ ಮಹೇಶ್, ಈ ಚಿತ್ರಕ್ಕೂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ.
‘ಆ ಕಥೆ ಎಲ್ಲಿಗೆ ಮುಗಿದಿತ್ತೋ, ಇದು ಅಲ್ಲಿಂದ ಶುರುವಾಗುತ್ತದೆ. ಗ್ರಾಮ ಪಂಚಾಯಿತಿ ಸದಸ್ಯನಾದ ಮೇಲೆ ಆತ ಏನೆಲ್ಲಾ ಸವಾಲುಗಳನ್ನು ಎದುರಿಸುತ್ತಾನೆ. ತಾನು ಕಂಡ ಕನಸು ನನಸಾಗುತ್ತದಾ ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗುತ್ತದೆ. ಆ ಚಿತ್ರಕ್ಕೆ ಕೆಲಸ ಮಾಡಿದ ತಂಡವೇ ಈ ಚಿತ್ರಕ್ಕೂ ಬಹುತೇಕ ಮುಂದುವರಿಯಲಿದೆ’ ಎನ್ನುತ್ತಾರೆ ಚಿತ್ರದ ನಿರ್ದೇಶಕ ಮಹೇಶ್.
‘ಅಯೋಗ್ಯ ೨’ ಚಿತ್ರಕ್ಕೆ ಮುಂದಿನ ಬುಧವಾರ, ಡಿಸೆಂಬರ್ ೧೧ರಂದು ಚಿತ್ರದ ಮುಹೂರ್ತ ನಡೆಯಲಿದ್ದು, ಅಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗಲಿದೆ.
ಮಂಡ್ಯ, ಮದ್ದೂರು ಮುಂತಾದ ಕಡೆ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದ್ದು, ೨೦೨೫ರ ಆಗಸ್ಟ್ ೧೫ರಂದು ಚಿತ್ರ ಬಿಡುಗಡೆಯಾಗಲಿದೆಯಂತೆ. ‘ಭುವನಂ ಗಗನಂ’ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ವಿಶ್ವಜಿತ್ ರಾವ್ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. ‘ಅಯೋಗ್ಯ’ ಚಿತ್ರವು ಕನ್ನಡದಲ್ಲಿ ಮೊದಲು ಬಿಡುಗಡೆಯಾಗಿ ಬೇರೆ ಭಾಷೆಗಳಿಗೆ ಡಬ್ ಆಗಿತ್ತು. ಆದರೆ, ‘ಅಯೋಗ್ಯ ೨’ ಚಿತ್ರವು ಕನ್ನಡದಲ್ಲಿ ನಿರ್ಮಾಣವಾಗಿ ತೆಲುಗು, ತಮಿಳಿಗೆ ಡಬ್ ಆಗಿ ಮೂರು ಭಾಷೆಗಳಲ್ಲೂ ಒಟ್ಟಿಗೆ ಬಿಡುಗಡೆಯಾಗಲಿದೆಯಂತೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…