ಚಿತ್ರ ಮಂಜರಿ

ಅಭಿಷೇಕ್ ಅಂಬರೀಶ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಮೊದಲ‌ 3 ದಿನಗಳಲ್ಲಿ ಗಳಿಸಿದ್ದೆಷ್ಟು?

ಕಳೆದ ಶುಕ್ರವಾರ ( ನವೆಂಬರ್ 24 ) ಅಭಿಷೇಕ್ ಅಂಬರೀಶ್ ಹಾಗೂ ನಿರ್ದೇಶಕ ಸೂರಿ ಕಾಂಬಿನೇಷನ್ ನ‌ ಬ್ಯಾಡ್ ಮ್ಯಾನರ್ಸ್ ಚಿತ್ರ ಬಿಡುಗಡೆಯಾಗಿದೆ.

ರುದ್ರ ಎಂಬ ರಗಡ್ ಪೊಲೀಸ್ ಪಾತ್ರವನ್ನು ಅಭಿಷೇಕ್ ಅಂಬರೀಶ್ ತಮ್ಮ ಚೊಚ್ಚಲ ಚಿತ್ರ ಅಮರ್ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಮಾಸ್ ಚಿತ್ರದಲ್ಲಿ ನಟಿಸುವ ಮೂಲಕ ಪ್ರಯೋಗಕ್ಕೆ ಕೈಹಾಕಿದ್ದಾರೆ.

ನಿರ್ದೇಶಕ ಸೂರಿ ತಮ್ಮ ಕಥೆ ಹೇಳುವ ವಿಭಿನ್ನ ಶೈಲಿಯನ್ನು ಇಲ್ಲಿಯೂ ಮುಂದುವರಿಸಿದ್ದಾರೆ. ಕಥಾನಾಯಕ‌ ಗನ್ ಮಾಫಿಯಾ ವಿರುದ್ಧ ಹೇಗೆ ಹೋರಾಡುತ್ತಾನೆ ಎಂಬುದನ್ನು ತಮ್ಮ ಏರಿಳಿತದ ಸ್ಕ್ರೀನ್ ಪ್ಲೇ ಮೂಲಕ ಚೆನ್ನಾಗಿಯೇ ಕಟ್ಟಿಕೊಟ್ಟಿದ್ದಾರೆ‌.

 

ಆದರೆ ಚಿತ್ರ ಸಂಪೂರ್ಣವಾಗಿ ಸಕ್ಸಸ್ ರಿಪೋರ್ಟ್ ಪಡೆದುಕೊಂಡಿಲ್ಲ. ಚಿತ್ರ ನೋಡಿದ ಸಿನಿ ರಸಿಕರು ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಚಿತ್ರತಂಡ ಮಾತ್ರ ಚಿತ್ರ ಮೊದಲ ವಾರಾಂತ್ಯಕ್ಕೆ 6.4 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ ಎಂದು ಪೋಸ್ಟರ್ ಹಂಚಿಕೊಂಡಿದೆ‌. ಚಿತ್ರಕ್ಕೆ ಯಾವ ರೀತಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತೋ ಅದೇ ರೀತಿ ಈ ಕಲೆಕ್ಷನ್ ಬಗ್ಗೆ ಸಹ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.

andolana

Recent Posts

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

8 mins ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

34 mins ago

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್‌…

43 mins ago

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ…

51 mins ago

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

2 hours ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

2 hours ago