ಚಿತ್ರ ಮಂಜರಿ

ವರದಕ್ಷಿಣೆ ಪ್ರಕರಣ: ಹಿರಿಯ ನಟಿ ಅಭಿನಯಾಗೆ ಎರಡು ವರ್ಷ ಜೈಲು ಸಜೆ

ಅಣ್ಣನ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ, ಅಭಿನಯಾ ತಾಯಿ ಸೇರಿ ಮೂವರಿಗೆ ಶಿಕ್ಷೆ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಅಭಿನಯ ಅವರಿಗೆ ತಮ್ಮ ಅತ್ತಿಗೆಗೆ (ಅಣ್ಣನ ಹೆಂಡತಿ) ವರದಕ್ಷಿಣೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಾಶಿನಾಥ ಅವರ ʼಅನುಭವʼ ಚಿತ್ರದಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್ನ ಹಿರಿಯ ನಟಿ ಅಭಿನಯ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿತ್ತು. ಅಭಿನಯ ಅವರು ತಮ್ಮ ಅಣ್ಣ ಶ್ರೀನಿವಾಸ್ ಅವರ ಹೆಂಡತಿ ಲಕ್ಷ್ಮಿದೇವಿಯವರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ 2002 ರಲ್ಲಿ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ವರದಕ್ಷಿಣೆ ಬೇಡಿಕೆ, ಕಿರುಕುಳ ಆರೋಪದಲ್ಲಿ ಹೈಕೋರ್ಟ್ ಶಿಕ್ಷೆ ಪ್ರಕಟಿಸಿದೆ. ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಅಭಿನಯಾ ಮತ್ತು ಅವರ ತಾಯಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸರ್ಕಾರದ ಪರ ವಕೀಲ ಹೆಚ್.ವಿ. ವಿನಾಯಕ್ ವಾದ ಮಂಡಿಸಿದ್ದರು.
ಲಕ್ಷ್ಮೀದೇವಿಯವರು 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಮದುವೆಯಾಗಿದ್ದರು. ಮದುವೆ ವೇಳೆ ಅಭಿನಯ ಕುಟುಂಬ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ನಂತರವೂ 1 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು 20 ಸಾವಿರ ಪಡೆದಿದ್ದರು. ವರದಕ್ಷಿಣೆ ಪಡೆದಿದ್ದಲ್ಲದೆ ಲಕ್ಷ್ಮೀದೇವಿ ಅವರನ್ನು ಅವರ ಪೋಷಕರ ಮನೆಯಲ್ಲಿ ಬಿಟ್ಟಿದ್ದರು. ಹೆರಿಗೆಗೆ ತವರು ಮನೆಗೆ ಹೋದ ಲಕ್ಷ್ಮೀದೇವಿಯನ್ನು ಅಭಿನಯ ಕುಟುಂಬ ಮನೆಗೆ ಕರೆತಂದಿರಲಿಲ್ಲ.
ಇನ್ನು ಗಂಡನ ಮನೆಗೆ ಬಂದ ಲಕ್ಷ್ಮೀ ಹಾಗು ಪೋಷಕರಿಗೆ ಅವಮಾನ ಮಾಡಿದ್ದಾರೆಂದು ದೂರಲಾಗಿತ್ತು. 2002 ರಲ್ಲಿ ಲಕ್ಷ್ಮಿ ಹಾಗೂ ಪೋಷಕರು ಅಭಿನಯ ಸೇರಿ ಇಡೀ ಕುಟುಂಬದ ವಿರುದ್ಧ ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದರು. ಚಂದ್ರಾ ಲೇಔಟ್ ಪೊಲೀಸರ ಚಾರ್ಜ್‌ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟಿಸಿದ್ದರು. ನಂತರ ಜಿಲ್ಲಾ ನ್ಯಾಯಾಲಯ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗು ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.
ಇದೀಗ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ. ಎ1-ಶ್ರೀನಿವಾಸ್ ಹಾಗೂ ಎ-2 ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆಯಲ್ಲಿ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ನಟಿ ಅಭಿನಯ ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಕಾರಾಗೃಹ ಶಿಕ್ಷೆ ಪ್ರಕಟವಾಗಿದೆ. ನಾಲ್ಕನೇ ಆರೋಪಿ ಚಲುವರಾಜ್, ಐದನೇ ಆರೋಪಿ ಅಭಿನಯಾಗೆ 2 ವರ್ಷ ಜೈಲು ಹಾಗೂ ದಂಡ ವಿಧಿಸಲಾಗಿದೆ.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

42 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

53 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

60 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago