ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್, ಚೆನ್ನೈ ಸೂಪರ್ ಕಿಂಗ್ಸ್ನ ಹಾಲಿ ಕ್ಯಾಪ್ಟನ್ ಎಂ.ಎಸ್. ಧೋನಿಸದ್ಯ ಸುದ್ದಿಯಲ್ಲಿದ್ದಾರೆ. ಚಿತ್ರರಂಗದ ಜತೆ ಅವರು ನಂಟು ಬೆಳೆಸಿಕೊಳ್ಳುತ್ತಿದ್ದಾರೆ. ‘ಧೋನಿ ಎಂಟರ್ಟೇನ್ಮೆಂಟ್’ ಹೆಸರಿನ ನಿರ್ಮಾಣಸಂಸ್ಥೆ ಆರಂಭಿಸಿ ಸಿನಿಮಾ ನಿರ್ಮಾಣಕ್ಕೆ ಅವರು ಮುಂದಾಗುತ್ತಿದ್ದಾರೆ. ಹೀಗಿರುವಾಗಲೇ ಹೊಸ ಅಪ್ಡೇಟ್ ಒಂದು ಸಿಕ್ಕಿದೆ. ಕೂಲ್ ಕ್ಯಾಪ್ಟನ್ ಈಗ ನಟನೆಯಲ್ಲೂ ತೊಡಗಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಖ್ಯಾತ ನಿರ್ದೇಶಕನ ಜತೆ ಅವರು ಕೈ ಜೋಡಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು.
ಚಿತ್ರರಂಗಕ್ಕೂ ಕ್ರಿಕೆಟ್ ಲೋಕಕ್ಕೂ ಉತ್ತಮ ನಂಟಿದೆ. ಟೀಂ ಇಂಡಿಯಾ ಮಾಜಿ ಬೌಲರ್ ಶ್ರೀಶಾಂತ್, ಇರ್ಫಾನ್ ಪಠಾಣ್ ಸೇರಿ ಅನೇಕರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ಧೊನಿಯ ಸರದಿ. ‘ವಿಕ್ರಮ್’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಲೋಕೇಶ್ ಕನಗರಾಜ್ ಮುಂದಿನ ಪ್ರಾಜೆಕ್ಟ್ನಲ್ಲಿ ಧೋನಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.
ಲೋಕೇಶ್ ಅವರು ತಮ್ಮ ಮುಂದಿನ ಪ್ರಾಜೆಕ್ಟ್ ಮೇಲೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರದಲ್ಲಿ ಧೋನಿಗೆ ಒಂದು ಪ್ರಮುಖ ಪಾತ್ರ ನೀಡಬೇಕು ಎನ್ನುವ ಆಲೋಚನೆಯಲ್ಲಿ ಲೋಕೇಶ್ ಇದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.
ಲೋಕೇಶ್ ಕನಗರಾಜ್ ಹಾಗೂ ದಳಪತಿ ವಿಜಯ್ ಅವರು ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 67’ ಎಂದು ನಾಮಕರಣ ಮಾಡಲಾಗಿದೆ. ಈ ಚಿತ್ರದಲ್ಲಿ ಧೋನಿ ನಟಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಧೋನಿ ಅವರು ಐಪಿಎಲ್ನಲ್ಲಿ ‘ಚೆನ್ನೈ ಸೂಪರ್ ಕಿಂಗ್ಸ್’ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಕಾರಣಕ್ಕೆ ತಮಿಳುನಾಡಿನಲ್ಲಿ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಹೀಗಾಗಿ, ಅವರು ತಮಿಳು ಚಿತ್ರರಂಗದತ್ತ ಹೆಚ್ಚು ವಾಲುತ್ತಿದ್ದಾರೆ.
ಧೋನಿ ನಿರ್ಮಾಣ ಮಾಡುವ ಮೊದಲ ಸಿನಿಮಾಗೆ ರಮೇಶ್ ತಮಿಳ್ಮಣಿ ಅವರು ನಿರ್ದೇಶನ ಮಾಡಲಿದ್ದಾರೆ. ಅವರು ಈ ಮೊದಲು ‘ಅಥರ್ವ-ದಿ ಒರ್ಜಿನ್’ ಹೆಸರಿನ ಗ್ರಾಫಿಕ್ ನಾವೆಲ್ ಅನ್ನು ಬರೆದಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…