112 ದಿನಗಳ ಸುದೀರ್ಘ ಪಯಣಯದ ಬಿಗ್ಬಾಸ್ ಸೀಸನ್ 10ನ ವಿನ್ನರ್ ಆಗಿ ಕಾರ್ತಿಕ್ ಮಹೇಶ್ ಹೊರ ಹೊಮ್ಮಿದ್ದಾರೆ. ಈ ಟ್ರೋಪಿ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕಾರ್ತಿಕ್‌ಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು, ಬೇಸರ, ಖುಷಿಗಳನ್ನು ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.
ಸ್ವತಃ ಕಾರ್ತಿಕ್ ಮಹೇಶ್ ಹೇಳಿಕೊಂಡಿರುವಂತೆ ಬಿಗ್ಬಾಸ್ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್ಬಾಸ್ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ. ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು. ಫಿನಾಲೆ ವಾರದಲ್ಲಿ ಯಾರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದಾಗ ಬಹುತೇಕರು ಹೇಳಿದ್ದಿದ್ದು ಕಾರ್ತಿಕ್ ಹೆಸರನ್ನು ಆದರೆ ಅದೆಲ್ಲವೂ ಸುಳ್ಳಾಗಿದ್ದು, ಬಿಗ್ ಬಾಸ್ ಟ್ರೋಫಿ ಎತ್ತಿ ಹಿಡಿಯುವಲ್ಲಿ ಕಾರ್ತಿಕ್ ಯಶಸ್ವಿಯಾಗಿದ್ದಾರೆ.
ಕಾರ್ತಿಕ್ರ ಬಿಗ್ಬಾಸ್ ಜರ್ನಿ ಹಲವು ಏರು-ಪೇರುಗಳನ್ನು ಒಳಗೊಂಡಿತ್ತು. ಆರಂಭದಲ್ಲಿ ಅವರು ಅಸಮರ್ಥರಾಗಿ ಮನೆಗೆ ಎಂಟ್ರಿ ಕೊಟ್ಟರು. ಆರಂಭದಲ್ಲಿ ಸಂಗೀತಾ ಜೊತೆ ಗೆಳೆತನ ಮಾಡಿ ಬೆನ್ನೆಲುಬಾಗಿದ್ದರು. ಸಂಗೀತಾ ಹಾಗೂ ಕಾರ್ತಿಕ್ ಒಳ್ಳೆಯ ಬಾಂಧವ್ಯ ಹೊಂದಿದ್ದರು. ಜೊತೆಗೆ ತನಿಷಾ ಸಹ ಕಾರ್ತಿಕ್‌ಗೆ ಒಳ್ಳೆಯ ಗೆಳೆಯರಾಗಿದ್ದರು. ಆರಂಭದ ಹಲವು ದಿನ ಮನೆಯ ಗಟ್ಟಿ ಸ್ಪರ್ಧಿಯಾಗಿದ್ದ ವಿನಯ್ಗೆ ಪ್ರಬಲ ಎದುರಾಳಿಯಾಗಿ ಆಡಿದ್ದರು ಕಾರ್ತಿಕ್. ವಿನಯ್ ‘ಗ್ಯಾಂಗ್’ ಅನ್ನು ಸಂಗೀತಾ ಪ್ರಬಲವಾಗಿ ಎದುರಿಸಲು ಕಾರ್ತಿಕ್ ಸಹ ಕಾರಣವಾಗಿದ್ದರು.
ಫಿನಾಲೆಗೆ ಕೆಲವು ವಾರಗಳು ಇರವಾಗ ಕಾರ್ತಿಕ್ ಆಟದಲ್ಲಿ ಉತ್ಸಾಹ ಕಾಣಲಿಲ್ಲ. ಕೊನೆಯ ಎರಡು ವಾರಗಳಲ್ಲಿ ಮತ್ತೆ ಉತ್ಸುಹಕತೆಯಿಂದ ಮನೆಯ ಎಲ್ಲಾ ಕೆಲಸಗಳಲ್ಲಿ ಸಕ್ರಿಯರಾಗತೊಡಗಿದ ಕಾರ್ತಿಕ್, ಎಲ್ಲರಿಂದಲೂ ಸೈ ಎನಿಸಿಕೊಂಡು ಬಿಗ್ ಬಾಸ್ ಸಿಸನ್ 10ರ ವಿಜೇತರಾಗಿ ಹೊರಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಹಲವಾರು ನೋವು, ಜಗಳ, ಮನಸ್ಥಾಪ ಎಲ್ಲವನ್ನು ಒಮ್ಮತದಿಂದಲೇ ಸಹಿಸಿದ ಕಾರ್ತಿಕ್ ಆಟವನ್ನು ರಾಜ್ಯದ ಜನತೆ ಮೆಚ್ಚಿ ಮತ ನೀಡಿ ವಿನ್ನರ್ ಮಾಡಿದ್ದಾರೆ.
ಕಾರ್ತಿಕ್ ತನ್ನ ತಾಯಿಗಾಗಿ ಒಂದು ಮನೆ ಕಟ್ಟಿಕೊಡಬೇಕು ಎಂಬ ಆಸೆಯನ್ನು ಕಾರ್ತಿಕ್ ಹೇಳಿಕೊಂಡಿದ್ದರು. ಅಂತೆಯೇ ಈಗ 50 ಲಕ್ಷ ಗೆದ್ದಿದ್ದಾರೆ. ಜೊತೆಗೆ ಒಂದು ಬ್ರಿಜಾ ಕಾರು ಸಹ ಗೆದ್ದಿದ್ದಾರೆ. ಆರಂಭದಿಂದಲೂ ಚೆನ್ನಾಗಿಯೇ ಆಡಿಕೊಂಡು ಬಂದಿದ್ದ ಡ್ರೋನ್ ಪ್ರತಾಪ್ ಎರಡನೇ ಸ್ಥಾನ ಪಡೆದಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…