ಚಿತ್ರ ಮಂಜರಿ

Bigg Boss kannada season 10: ಕಾರ್ತಿಕ್‌ ವಿನ್ನರ್‌; ಡ್ರೋನ್‌ ರನ್ನರ್‌!

112 ದಿನಗಳ ಸುದೀರ್ಘ ಪಯಣಯದ ಬಿಗ್​ಬಾಸ್ ಸೀಸನ್‌ 10ನ ವಿನ್ನರ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದ್ದಾರೆ. ಈ ಟ್ರೋಪಿ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕಾರ್ತಿಕ್‌ಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು, ಬೇಸರ, ಖುಷಿಗಳನ್ನು ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

ಸ್ವತಃ ಕಾರ್ತಿಕ್ ಮಹೇಶ್ ಹೇಳಿಕೊಂಡಿರುವಂತೆ ಬಿಗ್​ಬಾಸ್​ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್​ಬಾಸ್​ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ. ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು. ಫಿನಾಲೆ ವಾರದಲ್ಲಿ ಯಾರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದಾಗ ಬಹುತೇಕರು ಹೇಳಿದ್ದಿದ್ದು ಕಾರ್ತಿಕ್ ಹೆಸರನ್ನು ಆದರೆ ಅದೆಲ್ಲವೂ ಸುಳ್ಳಾಗಿದ್ದು, ಬಿಗ್‌ ಬಾಸ್‌ ಟ್ರೋಫಿ ಎತ್ತಿ ಹಿಡಿಯುವಲ್ಲಿ ಕಾರ್ತಿಕ್‌ ಯಶಸ್ವಿಯಾಗಿದ್ದಾರೆ.

ಕಾರ್ತಿಕ್​ರ ಬಿಗ್​ಬಾಸ್ ಜರ್ನಿ ಹಲವು ಏರು-ಪೇರುಗಳನ್ನು ಒಳಗೊಂಡಿತ್ತು. ಆರಂಭದಲ್ಲಿ ಅವರು ಅಸಮರ್ಥರಾಗಿ ಮನೆಗೆ ಎಂಟ್ರಿ ಕೊಟ್ಟರು. ಆರಂಭದಲ್ಲಿ ಸಂಗೀತಾ ಜೊತೆ ಗೆಳೆತನ ಮಾಡಿ ಬೆನ್ನೆಲುಬಾಗಿದ್ದರು. ಸಂಗೀತಾ ಹಾಗೂ ಕಾರ್ತಿಕ್ ಒಳ್ಳೆಯ ಬಾಂಧವ್ಯ ಹೊಂದಿದ್ದರು. ಜೊತೆಗೆ ತನಿಷಾ ಸಹ ಕಾರ್ತಿಕ್​ಗೆ ಒಳ್ಳೆಯ ಗೆಳೆಯರಾಗಿದ್ದರು. ಆರಂಭದ ಹಲವು ದಿನ ಮನೆಯ ಗಟ್ಟಿ ಸ್ಪರ್ಧಿಯಾಗಿದ್ದ ವಿನಯ್​ಗೆ ಪ್ರಬಲ ಎದುರಾಳಿಯಾಗಿ ಆಡಿದ್ದರು ಕಾರ್ತಿಕ್. ವಿನಯ್ ‘ಗ್ಯಾಂಗ್’ ಅನ್ನು ಸಂಗೀತಾ ಪ್ರಬಲವಾಗಿ ಎದುರಿಸಲು ಕಾರ್ತಿಕ್ ಸಹ ಕಾರಣವಾಗಿದ್ದರು.

ಫಿನಾಲೆಗೆ ಕೆಲವು ವಾರಗಳು ಇರವಾಗ ಕಾರ್ತಿಕ್‌ ಆಟದಲ್ಲಿ ಉತ್ಸಾಹ ಕಾಣಲಿಲ್ಲ. ಕೊನೆಯ ಎರಡು ವಾರಗಳಲ್ಲಿ ಮತ್ತೆ ಉತ್ಸುಹಕತೆಯಿಂದ ಮನೆಯ ಎಲ್ಲಾ ಕೆಲಸಗಳಲ್ಲಿ ಸಕ್ರಿಯರಾಗತೊಡಗಿದ ಕಾರ್ತಿಕ್‌, ಎಲ್ಲರಿಂದಲೂ ಸೈ ಎನಿಸಿಕೊಂಡು ಬಿಗ್‌ ಬಾಸ್‌ ಸಿಸನ್‌ 10ರ ವಿಜೇತರಾಗಿ ಹೊರಬಂದಿದ್ದಾರೆ. ಬಿಗ್‌ ಬಾಸ್‌ ಮನೆಯಲ್ಲಿ ಹಲವಾರು ನೋವು, ಜಗಳ, ಮನಸ್ಥಾಪ ಎಲ್ಲವನ್ನು ಒಮ್ಮತದಿಂದಲೇ ಸಹಿಸಿದ ಕಾರ್ತಿಕ್‌ ಆಟವನ್ನು ರಾಜ್ಯದ ಜನತೆ ಮೆಚ್ಚಿ ಮತ ನೀಡಿ ವಿನ್ನರ್‌ ಮಾಡಿದ್ದಾರೆ.

ಕಾರ್ತಿಕ್‌ ತನ್ನ ತಾಯಿಗಾಗಿ ಒಂದು ಮನೆ ಕಟ್ಟಿಕೊಡಬೇಕು ಎಂಬ ಆಸೆಯನ್ನು ಕಾರ್ತಿಕ್ ಹೇಳಿಕೊಂಡಿದ್ದರು. ಅಂತೆಯೇ ಈಗ 50 ಲಕ್ಷ ಗೆದ್ದಿದ್ದಾರೆ. ಜೊತೆಗೆ ಒಂದು ಬ್ರಿಜಾ ಕಾರು ಸಹ ಗೆದ್ದಿದ್ದಾರೆ. ಆರಂಭದಿಂದಲೂ ಚೆನ್ನಾಗಿಯೇ ಆಡಿಕೊಂಡು ಬಂದಿದ್ದ ಡ್ರೋನ್ ಪ್ರತಾಪ್ ಎರಡನೇ ಸ್ಥಾನ ಪಡೆದಿದ್ದಾರೆ.

andolanait

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

34 mins ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

40 mins ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

45 mins ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

50 mins ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

54 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago