ಚಿತ್ರ ಮಂಜರಿ

ʼಟಗರು ಪಲ್ಯʼ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ

ಹೊಸ ಪೋಸ್ಟರ್ ಬಿಡುಗಡೆ ಮಾಡಿ ಕಲಾವಿದೆಗೆ ಶುಭ ಕೋರಿದ ಚಿತ್ರತಂಡ 

ಬೆಂಗಳೂರು : ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್‌ವುಡ್ ಅಂಗಳಕ್ಕೆ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ.ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ನಾಯಕ ನಟಿಯಾಗಿ ಅಮೃತಾ ಪ್ರೇಮ್ ಸಿನಿಮಾಪ್ರೇಮಿಗಳಿಗೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ ‘ಟಗರು ಪಲ್ಯ’ ಲುಕ್​​ನಲ್ಲಿ ಪ್ರೇಕ್ಷಕರಿಂದ ಅಪಾರ ಪ್ರೀತಿ ಪಡೆದುಕೊಂಡಿರುವ ಅಮೃತಾ ಇಂದು ಹುಟ್ಟುಹಬ್ಬದ ಜೋಶ್‌ನಲ್ಲಿದ್ದಾರೆ. ಇವರು ಕಲಾವಿದೆಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಈ ಬಾರಿಯ ವಿಶೇಷತೆ. ಚಿತ್ರತಂಡವೂ ಕೂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಟಗರು ಪುಟ್ಟಿಗೆ ಶುಭ ಕೋರಿದೆ.

 ಟಗರು ಪಲ್ಯದಲ್ಲೇನಿದೆ?: ಟಗರು ಪಲ್ಯದಲ್ಲಿ ಅಮೃತಾ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ವರ್ಕ್‌ಶಾಪ್‌ ಮೂಲಕ ಸಾಕಷ್ಟು ತಯಾರಿ ನಡೆಸಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಭಿನಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಉಮೇಶ್ ಕೆ.ಕೃಪ, “ಹಳ್ಳಿ ಹುಡುಗಿ ಪಾತ್ರ ಅಂದ್ರೆ ಸುಲಭದ ವಿಷಯವಲ್ಲ. ಅದಕ್ಕೆ ಆದಷ್ಟು ಬೇಗ ಒಗ್ಗಿಕೊಂಡು ಆ ನಯ ನಾಜೂಕನ್ನು ಬಹಳ ಬೇಗ ಅರ್ಥಮಾಡಿಕೊಂಡು ಅಮೃತ ನಟಿಸಿದ್ದಾರೆ. ಭಾಷೆ ಮೇಲೆ ಅವರಿಗೆ ಹಿಡಿತವಿದೆ. ಮಂಡ್ಯ ಸ್ಲ್ಯಾಂಗ್ ತುಂಬಾ ಚೆನ್ನಾಗಿ ಮಾತನಾಡಿದ್ದಾರೆ. ಈಗಾಗಲೇ ಎರಡು ಶೆಡ್ಯೂಲ್ ಕಂಪ್ಲೀಟ್ ಆಗಿದ್ದು ಬಹಳ ಬೇಗ ಎಲ್ಲವನ್ನು ಕಲಿತುಕೊಂಡು ಅಭಿನಯ ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು

andolanait

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

51 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

3 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

4 hours ago