Mysore
23
overcast clouds
Light
Dark

ಸಿಎಎ ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು: ನಟ ವಿಜಯ್‌

ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಕಾಯ್ದೆಯು ಸ್ವೀಕಾರಾರ್ಹವಲ್ಲ. ಇದನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್‌ ಹೇಳಿದ್ದಾರೆ.

2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಜಾರಿಗೊಳಿಸಿದ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ದಳಪತಿ ವಿಜಯ್‌ ವಾಗ್ದಾಳಿ ನಡೆಸಿದ್ದಾರೆ.

ಸಿಎಎ ಜಾರಿಯನ್ನು ಒಪ್ಪಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ 2019ರಂತಹ ಯಾವುದೇ ಕಾನೂನನ್ನು ದೇಶದಲ್ಲಿ ಸಹಿಸಲು ಸಾಧ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಬಾಳುತ್ತಿರುವಾಗ ಇಂತಹ ಕಾನೂನಿನ ಅಗತ್ಯ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ನಟ ವಿಜಯ್ ಈ ಕಾನೂನನ್ನು ರಾಜ್ಯದಲ್ಲಿ ಜಾರಿ ಮಾಡದಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು. ಟಿವಿಕೆ ಸಂಸ್ಥಾಪಕ ವಿಜಯ್ ಸೇರಿದಂತೆ ದೇಶಾದ್ಯಂತ ವಿರೋಧ ಪಕ್ಷದ ನಾಯಕರು ಸಿಎಎ ಅನುಷ್ಠಾನದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ