ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಕಾಯ್ದೆಯು ಸ್ವೀಕಾರಾರ್ಹವಲ್ಲ. ಇದನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್ ಹೇಳಿದ್ದಾರೆ.
2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಜಾರಿಗೊಳಿಸಿದ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ದಳಪತಿ ವಿಜಯ್ ವಾಗ್ದಾಳಿ ನಡೆಸಿದ್ದಾರೆ.
ಸಿಎಎ ಜಾರಿಯನ್ನು ಒಪ್ಪಲು ಸಾಧ್ಯವಿಲ್ಲ. ಪೌರತ್ವ ತಿದ್ದುಪಡಿ 2019ರಂತಹ ಯಾವುದೇ ಕಾನೂನನ್ನು ದೇಶದಲ್ಲಿ ಸಹಿಸಲು ಸಾಧ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಬಾಳುತ್ತಿರುವಾಗ ಇಂತಹ ಕಾನೂನಿನ ಅಗತ್ಯ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ನಟ ವಿಜಯ್ ಈ ಕಾನೂನನ್ನು ರಾಜ್ಯದಲ್ಲಿ ಜಾರಿ ಮಾಡದಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು. ಟಿವಿಕೆ ಸಂಸ್ಥಾಪಕ ವಿಜಯ್ ಸೇರಿದಂತೆ ದೇಶಾದ್ಯಂತ ವಿರೋಧ ಪಕ್ಷದ ನಾಯಕರು ಸಿಎಎ ಅನುಷ್ಠಾನದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…