ಬೆಂಗಳೂರು: ಕೆಜಿಎಫ್ ಖ್ಯಾತಿಯ ಕನ್ನಡದ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ.
ಕೆಜಿಎಫ್ ಸರಣಿ ಚಿತ್ರಗಳ ಬಳಿಕ ಯಶಸ್ಸು ಕಂಡಿರುವ ನಟ ಯಶ್, ಬಂದ ಚಿತ್ರಗಳನ್ನು ಒಪ್ಪಿಕೊಳ್ಳದೇ, ಕಥೆ ಆಯ್ಕೆಯಲ್ಲಿ ಜಾಣ ನಡೆ ತೋರಿಸಿರುವ ಅವರು, ನೂತನ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ.
ಸದ್ಯ ಯಶ್ ತಮ್ಮ ಮುಂದಿನ ಚಿತ್ರವಾದ ಟಾಕ್ಸಿಕ್ ನಲ್ಲಿ ಬ್ಯುಸಿಯಾಗಿದ್ದು, ಚಿತ್ರೀಕರಣದಲ್ಲಿ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದು, ಜನವರಿ ೮ ರಂದು ತಮ್ಮ ಹುಟ್ಟು ಹಬ್ಬದ ದಿನದಂದು ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲ ಎಂದು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಪೋಸ್ಟ್‌ನಲ್ಲೇನಿದೆ?
ಜನವರಿ 8..
ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು, ನನ್ನ ಜೊತೆ ಖುದ್ದು ಇದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.
ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ
ಆದರೆ, ಸಿನಿಮಾದ ಕೆಲಸ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಬೇಕಿರುವುದರಿಂದ ಈ ಜನವರಿ 8ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ..
ನಿಮ್ಮ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು..
ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ..
ನಿಮ್ಮ ಪ್ರೀತಿಯ -ಯಶ್
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…