ಕ್ಯಾಪ್ಟನ್ ಕೂಲ್ ಖ್ಯಾತಿಯ ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಪತ್ನಿ ಸಾಕ್ಷಿ ಜೊತೆಗೂಡಿ ಧೋನಿ ಎಂಟರ್ ಟೈನ್ಮೆಂಟ್ ಬ್ಯಾನರ್ ಶುರು ಮಾಡಿರುವ ಅವರು ತಮಿಳು ಸೇರಿದಂತೆ ಬೇರೆ ಭಾಷೆಗಳ ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಈ ಬ್ಯಾನರ್ ಯಡಿಯಲ್ಲಿ ಮೂಡಿಬರ್ತಿರುವ ’L.G.M’ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಿ ಇಡೀ ತಂಡಕ್ಕೆ ಕ್ಯಾಪ್ಟನ್ ಕೂಲ್ ಶುಭಾಶಯ ತಿಳಿಸಿದ್ದಾರೆ.
’L.G.M’ ಸಿನಿಮಾಗೆ ವಿಕಾಸ್ ಹಸಿಜಾ ಬಂಡವಾಳ ಹೂಡಿದ್ದಾರೆ. ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿರುವ ಅವರು, ಕೊನೆಯ ಹಂತದ ಚಿತ್ರೀಕರಣದಲ್ಲಿದ್ದು, ಶೀಘ್ರದಲ್ಲಿಯೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಶುರುವಾಗಲಿವೆ. ಈ ಸಿನಿಮಾ ಮೂಲಕ ತಮಿಳು ಚಿತ್ರೋದ್ಯಮದಲ್ಲಿ ನಮ್ಮ ಪಯಣ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ಚಿತ್ರದ ಕ್ರಿಯೇಟಿವ್ ಹೆಡ್ ಆಗಿರುವ ಪ್ರಿಯಾಂಶು ಚೋಪ್ರಾ, ’L.G.M’ ಹೊಸ ಪರಿಕಲ್ಪನೆಯಾಗಿದೆ. ಅನೇಕ ಸ್ವಾರಸ್ಯಕರ ಅಂಶಗಳು ಚಿತ್ರದಲ್ಲಿವೆ. ಪ್ರತಿಭಾನ್ವಿತ ಚಿತ್ರತಂಡ ಹಾಗೂ ತಾಂತ್ರಿಕ ಬಳಗದವರು ಚಿತ್ರದಲ್ಲಿದ್ದಾರೆ ಎಂದಿದ್ದಾರೆ.
ರಮೇಶ್ ಥಮಿಳ್ಮಣಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ’L.G.M’ ಸಿನಿಮಾ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದ್ದು, ಹರೀಶ್ ಕಲ್ಯಾಣ್, ನದಿಯಾ ಹಾಗೂ ಲವ್ ಟು ಡೇ ಖ್ಯಾತಿಯ ಇವಾನಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಯೋಗಿ ಬಾಬು ಹಾಗೂ ಮಿರ್ಚಿ ವಿಜಯ್ ತಾರಾಬಳಗದಲ್ಲಿದ್ದಾರೆ. ರಮೇಶ್ ಥಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…