Kabza Upendra Movie Photos HD
ಬೆಂಗಳೂರು : ಮಾತಿನ ನಡುವೆ ಗಾದೆ ಮಾತೊಂದನ್ನು ಹೇಳಿದ್ದ ಸಲುವಾಗಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಕೆಲವರು ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದಿಂದ ಸ್ವಲ್ಪ ನಿರಾಳರಾಗಿರುವ ಉಪೇಂದ್ರ, ಇದೀಗ ಈ ಪ್ರಕರಣದ ಕುರಿತು ಪ್ರಪ್ರಥಮ ಪ್ರತಿಕ್ರಿಯೆ ನೀಡಿದ್ದಾರೆ. ‘ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ, ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ, ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ, ನನಗೆ ಕೊಡೆ.. ಧನ್ಯವಾದಗಳು Thank you all’ ಎಂದು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ಏಕಸದಸ್ಯ ಪೀಠವು ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಮಧ್ಯಂತರ ತಡೆ ನೀಡಿದೆ. ನಟ ಉಪೇಂದ್ರ ಪರ ವಾದಿಸಿದ ವಕೀಲ ಉದಯ್ ಹೊಳ್ಳ, ತಮ್ಮ ಕಕ್ಷಿದಾರರು ತಾವಾಡಿರುವ ಮಾತುಗಳಿಗೆ ಕ್ಷಮೆ ಯಾಚಿಸಿದ್ದಾರೆ. ಜೊತೆಗೆ ಆ ವಿಡಿಯೋವನ್ನೂ ಸಾಮಾಜಿಕ ಜಾಲತಾಣದಿಂದ ತೆಗೆದು ಹಾಕಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲ ಎಂದಿದ್ದರು.
ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕೆಂದು ಕೋರಿ ನಟ ಉಪೇಂದ್ರ ಪರ ವಕೀಲ ಉದಯ್ ಹೊಳ್ಳ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…