ಚಿತ್ರ ಮಂಜರಿ

ಕಾವೇರಿ ವಿವಾದ : ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನಟ ನೆನಪಿರಲಿ ಪ್ರೇಮ್

ಬೆಂಗಳೂರು : ಮೊನ್ನೆಯಷ್ಟೇ ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ ,ಇಂದು ಪತ್ರ  ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರಧಾನಿಗೆ ನಟ ಪ್ರೇಮ್‌ ಪತ್ರ ಬರೆದಿದ್ದಾರೆ.

ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದು. ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ ವಹಿಸಿ, ನಮ್ಮ ನೆಲದ ರೈತರಿಗೆ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಅವರು ಬರೆದಿದ್ದಾರೆ.

ಪತ್ರ ಬರೆಯುತ್ತಿರುವ ವಿಡಿಯೋವನ್ನು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್ ಮತ್ತು ಪಾಸಿಟಿವ್ ಎರಡೂ ಕಾಮೆಂಟ್ಸ್ ಅಲ್ಲಿ ನೋಡಬಹುದಾಗಿದೆ. ಕೆಲವರು ಭಾವನಾತ್ಮಕವಾಗಿ ಸ್ಪಂದಿಸಿದರೆ, ಇನ್ನೂ ಕೆಲವರು ಕಾನೂನಿನ ಪಾಠವನ್ನೂ ಮಾಡಿದ್ದಾರೆ.

ಕರವೇ (ನಾರಾಯಣ ಗೌಡ ಬಣ) ಇಂದು ರಕ್ತದಲ್ಲಿ ಬರೆದ ಒಂದು ಲಕ್ಷ ಪತ್ರವನ್ನು ಪ್ರಧಾನಿಗೆ ಬರೆಯುವಂತೆ ಕರೆಕೊಟ್ಟಿತ್ತು. ನಟಿ ಅಶ್ವಿನಿ ಗೌಡ ಸೇರಿದಂತೆ ಹಲವರು ಈ ಪತ್ರ ಚಳಿವಳಿಯಲ್ಲಿ ಭಾಗಿಯಾಗಿದ್ದಾರೆ.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago