ಚಿತ್ರ ಮಂಜರಿ

ಕಾವೇರಿ ನೀರು ವಿವಾದ: ನಟ ದರ್ಶನ್ ಮತ್ತು ಕಿಚ್ಚ ಸುದೀಪ್​​ ಟ್ವೀಟ್​

ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ನಮ್ಮ ರೈತರಿಗೆ ಮತ್ತು ರಾಜ್ಯಕ್ಕೆ ತೊಂದರೆಯಾಗಲಿದೆ. ಈ ನಮ್ಮ ಹೋರಾಟಕ್ಕೆ ಕನ್ನಡ ಚಿತ್ರರಂಗದ ಯಾವ ನಟ-ನಟಿಯರು ಸಾಥ್​ ನೀಡಿಲ್ಲ, ಸ್ಯಾಂಡಲ್​ವುಡ್​ ಮೌನ ಮುರಿದಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಇದೀಗ ಚಾಲೆಂಜಿಂಗ್​ ಸ್ಟಾರ್​, ನಟ ದರ್ಶನ್ ಮತ್ತು ಸುದೀಪ್​ ಟ್ವೀಟ್​ ಮಾಡಿದ್ದಾರೆ.

ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿದ ಸಂಗತಿಗೆ ಪ್ರತಿಕ್ರಿಯಿಸಿದ ದರ್ಶನ್, “ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದು ದರ್ಶನ್​ ಹೇಳಿದ್ದಾರೆ.

https://x.com/dasadarshan/status/1704405986113696113?s=20

ಇನ್ನೂ ನಟ ಕಿಚ್ಚ ಸುದೀಪ್​ ಕೂಡ ಈ ಕುರಿತು ಟ್ವೀಟ್​ ಮಾಡಿದ್ದು, “ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದು ಬರೆದು ಪೋಸ್ಟ್​ ಮಾಡಿದ್ದಾರೆ.

https://x.com/KicchaSudeep/status/1704440438655275020?s=20

andolanait

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

1 hour ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

13 hours ago