ಚಿತ್ರ ಮಂಜರಿ

ಕರ್ನಾಟಕದ ಬರ ಪರಿಸ್ಥಿತಿಯನ್ನು ಕೇಂದ್ರಕ್ಕೆ ಮನವರಿಕೆ ಮಾಡಬೇಕು: ನಟ ಸುದೀಪ್‌

ಬೆಂಗಳೂರು : ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್‌ ಬೆಂಬಲ ಸೂಚಿಸಿದ್ದಾರೆ.

ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞ ರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆʼʼ ಎಂದು ಹೇಳಿದ್ದಾರೆ.

ʼಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ.

ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ.ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿʼʼ ಎಂದು ಹಾರೈಸಿದ್ದಾರೆ.

ʼʼಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕುʼʼ ಎಂದು ನಟ ಸುದೀಪ್‌ ಟ್ವಿಟರ್‌ ನಲ್ಲಿ ಬರೆದುಕೊಂಡಿದ್ದಾರೆ.

https://x.com/KicchaSudeep/status/1706537729163751451?s=20

andolanait

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

2 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

2 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

2 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

2 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago