Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಚೆಕ್‌ ಬೌನ್ಸ್‌ ಪ್ರಕರಣ : ನಿರ್ದೇಶಕ ಗುರುಪ್ರಸಾದ್‌ ಗೆ ಜಾಮೀನು ಮಂಜೂರು

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ‘ಮಠ ಮತ್ತು ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶುಕ್ರವಾರ ಬಂಧನದ ಬೆನ್ನಲೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದ ಆರೋಪಿ ಗುರುಪ್ರಸಾದ್ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದರು. ಹೀಗಾಗಿ ನ್ಯಾಯಾಲಯವು ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ್ದರಿಂದ ಗಿರಿನಗರ ಠಾಣೆ ಪೊಲೀಸರು ಶುಕ್ರವಾರ ಗುರುಪ್ರಸಾದ್ ಅವರನ್ನು ಬಂಧಿಸಿದ್ದರು. ಬಳಿಕ 21ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆರೋಪಿಯಿಂದ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದ್ದಾರೆ.

ಏನಿದು ಚೆಕ್​ ಬೌನ್ಸ್​ ಪ್ರಕರಣ?: ಕೆಲ ವರ್ಷಗಳ ಹಿಂದೆ ನಿರ್ದೇಶಕ ಗುರುಪ್ರಸಾದ್, ಶ್ರೀನಿವಾಸ್ ಎಂಬವರಿಂದ 30 ಲಕ್ಷ ರೂ. ಸಾಲ ಪಡೆದಿದ್ದರು. ಈ ವೇಳೆ ಶ್ರೀನಿವಾಸ್‌ಗೆ ಶ್ಯೂರಿಟಿಗಾಗಿ ಚೆಕ್ ನೀಡಿದ್ದರು. ನಿಗದಿತ ಸಮಯದಲ್ಲಿ ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರು ಗುರುಪ್ರಸಾದ್ ವಿರುದ್ಧ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಕೋರ್ಟ್, ಗುರುಪ್ರಸಾದ್ ಅವರಿಗೆ ನೋಟಿಸ್ ನೀಡಿತ್ತು. ಆದ್ರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದರಿಂದಾಗಿ ಕೋರ್ಟ್​, ನಿರ್ದೇಶಕರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಜೊತೆಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಗಿರಿನಗರ ಪೊಲೀಸರಿಗೆ ಸೂಚಿಸಲಾಗಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ