ಚಿತ್ರ ಮಂಜರಿ

ಚೆಕ್‌ ಬೌನ್ಸ್‌ ಪ್ರಕರಣ : ನಿರ್ದೇಶಕ ಗುರುಪ್ರಸಾದ್‌ ಗೆ ಜಾಮೀನು ಮಂಜೂರು

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ‘ಮಠ ಮತ್ತು ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶುಕ್ರವಾರ ಬಂಧನದ ಬೆನ್ನಲೇ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದ ಆರೋಪಿ ಗುರುಪ್ರಸಾದ್ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದರು. ಹೀಗಾಗಿ ನ್ಯಾಯಾಲಯವು ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ್ದರಿಂದ ಗಿರಿನಗರ ಠಾಣೆ ಪೊಲೀಸರು ಶುಕ್ರವಾರ ಗುರುಪ್ರಸಾದ್ ಅವರನ್ನು ಬಂಧಿಸಿದ್ದರು. ಬಳಿಕ 21ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಆರೋಪಿಯಿಂದ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಫೆ.7ಕ್ಕೆ ಮುಂದೂಡಿದ್ದಾರೆ.

ಏನಿದು ಚೆಕ್​ ಬೌನ್ಸ್​ ಪ್ರಕರಣ?: ಕೆಲ ವರ್ಷಗಳ ಹಿಂದೆ ನಿರ್ದೇಶಕ ಗುರುಪ್ರಸಾದ್, ಶ್ರೀನಿವಾಸ್ ಎಂಬವರಿಂದ 30 ಲಕ್ಷ ರೂ. ಸಾಲ ಪಡೆದಿದ್ದರು. ಈ ವೇಳೆ ಶ್ರೀನಿವಾಸ್‌ಗೆ ಶ್ಯೂರಿಟಿಗಾಗಿ ಚೆಕ್ ನೀಡಿದ್ದರು. ನಿಗದಿತ ಸಮಯದಲ್ಲಿ ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರು ಗುರುಪ್ರಸಾದ್ ವಿರುದ್ಧ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಕೋರ್ಟ್, ಗುರುಪ್ರಸಾದ್ ಅವರಿಗೆ ನೋಟಿಸ್ ನೀಡಿತ್ತು. ಆದ್ರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದರಿಂದಾಗಿ ಕೋರ್ಟ್​, ನಿರ್ದೇಶಕರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಜೊತೆಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಗಿರಿನಗರ ಪೊಲೀಸರಿಗೆ ಸೂಚಿಸಲಾಗಿತ್ತು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.15 ಭಾನುವಾರ

17 mins ago

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

11 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

12 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

12 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

12 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

14 hours ago