Mysore
20
overcast clouds
Light
Dark

ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಚೆನ್ನೈ ನ್ಯಾಯಾಲಯ

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್​ನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.

ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್​ ಕುಮಾರ್​ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್​ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್​ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ