ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇಎಸ್ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್ನ ಕುರ್ಚಿ, ಪ್ರೊಜೆಕ್ಟರ್ಗಳನ್ನು ಜಪ್ತಿ ಮಾಡಿದ್ದರು. ಈಗ ಮತ್ತೊಮ್ಮೆ ಜಯಪ್ರದಾ ಅವರಿಗೆ ಹಿನ್ನಡೆ ಆಗಿದೆ.
ಚೆನ್ನೈನಲ್ಲಿ ಜಯಪ್ರದಾ ಅವರು ರಾಮ್ ಕುಮಾರ್ ಮತ್ತು ರಾಜ ಬಾಬು ಜೊತೆ ಸೇರಿ ಎರಡು ಚಿತ್ರಮಂದಿರಗಳನ್ನು ನಡೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಬಳದಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯವರು ಇಎಸ್ಐ ಹಣ ಕಡಿತ ಮಾಡಿಕೊಳ್ಳುತ್ತಿದ್ದರು. ಆದರೆ ಅದನ್ನು ಸರ್ಕಾರಿ ಕಾರ್ಮಿಕರ ವಿಮಾ ನಿಗಮಕ್ಕೆ ಜಯಪ್ರದಾ ಪಾವತಿಸುತ್ತಿರಲಿಲ್ಲ. ತಮಗೆ ತಮ್ಮ ಪಾಲಿನ ಇಎಸ್ಐ ಸಿಗುತ್ತಿಲ್ಲ ಎಂದು ಕಾರ್ಮಿಕರೊಬ್ಬರು ತಕರಾರು ತೆಗೆದಿದ್ದರು. ಆಗ ಸರ್ಕಾರಿ ಕಾರ್ಮಿಕರ ವಿಮಾ ನಿಗಮವು ಜಯಪ್ರದಾ ವಿರುದ್ಧ ದೂರು ದಾಖಲಿಸಿತ್ತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…