ಚಿತ್ರ ಮಂಜರಿ

ಕೊರಿಯೋಗ್ರಫರ್‌ ಕಮ್‌ ಹೀರೋ ಆಗುತ್ತಿರುವ ಜಾನಿ ಮಾಸ್ಟರ್‌

ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌  ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ​ ಸ್ಟಾರ್​ ನಟ-ನಟಿಯರಿಗೆ ಡ್ಯಾನ್ಸ್​ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್​ ಆದ ‘ರಾ ರಾ ರಕ್ಕಮ್ಮ’ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್​. ಈಗ ಅವರು ತೆರೆಮೇಲೆ ಹೀರೋ ಆಗಿ ಮಿಂಚಲು ಸಿದ್ಧತೆ ಮಾಡಿಕೊಂಡಿರುವುದು ವಿಶೇಷ. ಸಿದ್ಧತೆ ಮಾತ್ರವಲ್ಲ, ಅವರ ಹೊಸ ಸಿನಿಮಾ ಸೆಟ್ಟೇರಿದೆ ಕೂಡ. ಈ ಚಿತ್ರಕ್ಕೆ ‘ಯಥಾ ರಾಜ ತಥಾ ಪ್ರಜಾ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಮೂಲಕ ಅವರ ವೃತ್ತಿಜೀವನದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.

ಹೀರೋ ಆಗಿ ಬಡ್ತಿ ಪಡೆಯುತ್ತಿರುವ ಜಾನಿ ಮಾಸ್ಟರ್​ಗೆ ಅನೇಕರು ಶುಭ ಹಾರೈಸಿದ್ದಾರೆ. ಇತ್ತೀಚೆಗಷ್ಟೇ ‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಮುಹೂರ್ತ ನೆರವೇರಿತು. ತೆಲುಗು ನಟ ಶರ್ವಾನಂದ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿದ್ದಾರೆ. ಸಲ್ಮಾನ್‌ ಖಾನ್‌ ಬಾಮೈದ ಆಯುಷ್‌ ಶರ್ಮಾ ಅವರು ಕ್ಯಾಮೆರಾಗೆ ಚಾಲನೆ ನೀಡಿದ್ದಾರೆ. ನಿರ್ದೇಶಕ ಕರುಣಾ ಕುಮಾರ್‌ ಮೊದಲ ದೃಶ್ಯವನ್ನು ನಿರ್ದೇಶಿಸಿದ್ದಾರೆ.

ಈ ಸಿನಿಮಾದಲ್ಲಿ ಜಾನಿ ಮಾಸ್ಟರ್‌ ಜತೆಗೆ ‘ಸಿನಿಮಾ ಬಂಡಿ’ ಖ್ಯಾತಿಯ ನಟ ವಿಕಾಸ್‌ ಕೂಡ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ. ಶ್ರಷ್ಟಿ ವರ್ಮಾ ನಾಯಕಿಯಾಗಿ ನಟಿಸಲಿದ್ದಾರೆ. ಶ್ರೀನಿವಾಸ ವಿಟ್ಟಲ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹರೇಶ್‌ ಪಟೇಲ್‌ ಬಂಡವಾಳ ಹೂಡುತ್ತಿದ್ದು, ಅವರಿಗೆ ನಿರ್ದೇಶಕರು ಕೂಡ ಸಾಥ್​ ನೀಡಿದ್ದಾರೆ. ಓಂ ಮೂವೀ ಕ್ರಿಯೇಶನ್ಸ್‌ ಮತ್ತು ಶ್ರೀಕೃಷ್ಣ ಮೂವೀ ಕ್ರಿಯೇಶನ್ಸ್‌ ಬ್ಯಾನರ್‌ ಮೂಲಕ ಈ ಸಿನಿಮಾ ಮೂಡಿಬರಲಿದೆ.

‘ಯಥಾ ರಾಜ ತಥಾ ಪ್ರಜಾ’ ಚಿತ್ರದ ಬಗ್ಗೆ ಜಾನಿ ಮಾಸ್ಟರ್‌ ಮಾತನಾಡಿದ್ದಾರೆ. ‘ಮೆಗಾಸ್ಟಾರ್‌ ಚಿರಂಜೀವಿ ಅವರ ಬರ್ತ್‌ಡೇ ದಿನದಂದೇ ನಮ್ಮ ಸಿನಿಮಾ ಮುಹೂರ್ತ ಕಂಡಿರುವುದು ಸಂತಸದ ಸಂಗತಿ. ಶ್ರೀನಿವಾಸ್‌ ಅವರು ಕಥೆ ಹೇಳಿದ ರೀತಿಯೇ ಚೆನ್ನಾಗಿತ್ತು. ವಿಕಾಸ್‌ ನಟಿಸಿರುವ ‘ಸಿನಿಮಾ ಬಂಡಿ’ ಚಿತ್ರ ನೋಡಿದ್ದೇನೆ. ಇದೀಗ ಅವರೊಂದಿಗೆ ನಟಿಸುತ್ತಿರುವುದಕ್ಕೆ ಖುಷಿ ಇದೆ’ ಎಂದು ಅವರು ಹೇಳಿದ್ದಾರೆ.

ಈ ಸಿನಿಮಾಗೆ ರಾಧನಾ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪೊಲಿಟಿಕಲ್​ ಡ್ರಾಮಾ ಶೈಲಿಯ ಈ ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿವೆ. ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಮೂಡಿಬರಲಿರುವ ‘ಯಥಾ ರಾಜ ತಥಾ ಪ್ರಜಾ’ ಚಿತ್ರಕ್ಕೆ ಸೆಪ್ಟೆಂಬರ್‌ 15ರಂದು ಚಿತ್ರೀಕರಣ ಶುರುವಾಗಲಿದೆ.

andolana

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

11 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

11 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

12 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

13 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

13 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

16 hours ago