Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಸಿನಿಮಾಲ್‌ : ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’

‘ರೋಲೆಕ್ಸ್ ಕೋಮಲ್ ’ ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ಚಿತ್ರ. ಕೋಮಲ್, ಸೋನಾಲ್ ಮೊಂತೆರೋ ಮುಖ್ಯ ಭೂಮಿಕೆಯ ಈ ಚಿತ್ರದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ನಡೆಯಲಿದೆ. ಅವರೊಂದಿಗೆ ರಂಗಾಯಣ ರಘು, ಶೋಭರಾಜ್, ಅಪೂರ್ವ ಮುಂತಾದವರಿದ್ದಾರೆ. ಚಿತ್ರವನ್ನು ಅನಿಲ್ ಕುಮಾರ್ ತಮ್ಮ ಫೀನಿಕ್ಸ್ ಎಂಟರ್ಟೈನ್‌ಮೆಂಟ್ಸ್ ಮೂಲಕ ನಿರ್ಮಿಸುತ್ತಿದ್ದಾರೆ. ಅವರಿಗೆ ಕಥೆ ತುಂಬಾ ಇಷ್ಟ ಆದ್ದರಿಂದ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರಂತೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬರಲಿದೆ ಎನ್ನುವ ಅವರು ಸೆಪ್ಟೆಂಬರ್‌ನಲ್ಲಿ ಸಿನಿಮಾ ಬಿಡುಗಡೆ ಮಾಡಲು ನಿರ್ಧಿಸಿದ್ದಾರೆ. ರಾಕೇಶ್ ಸಿ. ತಿಲಕ್ ಛಾಯಾಗ್ರಹಣ, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜನೆ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!