ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಕೊಟ್ಟಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು.
ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ತಿಳಿಸಿದ್ದಾರೆ. ಹಲವು ದಿನಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.
ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…