ಕಾಲಿವುಡ್ ನಟ ವಿಜಯ್ ದಳಪತಿ ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (ಟಿವಿಕೆ) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ಕೇಳಲಾಗಿತ್ತು. ಈ ಪ್ರಶ್ನೆ ವಿಜಯ್, ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಸದ್ಯ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷ ವಿಜಯ್ ಸ್ಥಾಪಿಸಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರ ಮುಂದಿನ ನಡೆಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
ಕಳೆದ ನವೆಂಬರ್‌ನಲ್ಲಿ ಲೊಕೇಶ್ ಕನಕರಾಜ್ ನಿರ್ದೇಶನದ ಲಿಯೋ ಸಿನಿಮಾ ಯಶಸ್ಸಿನ ನಂತರ ಹೊಸ ಚಿತ್ರಗಳನ್ನು ದಳಪತಿ ವಿಜಯ್ ಒಪ್ಪಿಕೊಂಡಿದ್ದಾರೆ. ವಿಜಯ್ ಹೊಸ ಪಕ್ಷದ ಕೆಲಸದ ಜೊತೆಗೆ ಸದ್ಯ ಗ್ರೇಟೆಸ್ಟ್ ಅಫ್ ಆಲ್ ಟೈಮ್ ಸಿನಿಮಾ ತಂಡದೊಂದಿಗೆ ಕೆಲಸ ಮಾಡುತ್ತಿದ್ದಾರೆ.
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…