ಚೆನ್ನೈ: ಲಿಯೋ ಚಿತ್ರದಲ್ಲಿನ ನಾ ರೆಡಿ ಹಾಡಿನಲ್ಲಿ ಡ್ರಗ್ಸ್ ಪ್ರಚಾರ ಮಾಡಿದ ಆರೋಪದ ಮೇಲೆ ನಟ ದಳಪತಿ ವಿಜಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನ ‘ಆರ್‌ಟಿಐ’ ಕಾರ್ಯಕರ್ತ ಸೆಲ್ವಂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ಈ ಹಾಡು ಮಾದಕ ವ್ಯಸನವನ್ನು ಪ್ರತಿಪಾದಿಸುತ್ತಿರುವುದರಿಂದ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ನಟ ವಿಜಯ್ ಅವರ ಲಿಯೋ ಚಿತ್ರದ ಹಾಡು ‘ನಾ ರೆಡಿ’ ಯುವಕರಲ್ಲಿ ಮಾದಕ ವ್ಯಸನವನ್ನು ಉತ್ತೇಜಿಸುತ್ತದೆ ಮತ್ತು ರೌಡಿಸಂಗೆ ಉತ್ತೇಜನ ನೀಡುತ್ತದೆ ಎಂದು ಸೆಲ್ವಂ ಹೇಳಿದ್ದಾರೆ.
ಈ ಹಾಡಿನಲ್ಲಿ ನಟ ವಿಜಯ್ ಸಿಗರೇಟ್ ಹಿಡಿದುಕೊಂಡು ನೃತ್ಯ ಮಾಡುವ ದೃಶ್ಯಗಳಿವೆ. ಹಾಗಾಗಿ ನಟ ವಿಜಯ್ ವಿರುದ್ಧ ಮಾದಕ ದ್ರವ್ಯ ತಡೆ ಕಾಯ್ದೆಯ ಸೆಕ್ಷನ್ ಪ್ರಕಾರ ಕ್ರಮ ಕೈಗೊಳ್ಳಬೇಕು ಮತ್ತು ಇದನ್ನು ಬೆಂಬಲಿಸಿ ಹಾಡು ಬಿಡುಗಡೆ ಮಾಡಿದವರ ವಿರುದ್ಧವೂ ಕಾನೂನು ಪ್ರಕಾರ ಪ್ರಕರಣ ದಾಖಲಿಸಬೇಕು ಎಂದು ಸೆಲ್ವಂ ಆನ್‌ಲೈನ್‌ನಲ್ಲಿ ದೂರು ದಾಖಲಿಸಿದ್ದಾರೆ.
ಡ್ರಗ್ಸ್ನ್ನು ಬೆಂಬಲಿಸುವವರ ವಿರುದ್ಧ ಮತ್ತು ಡ್ರಗ್ಸ್ ತಡೆಗಟ್ಟುವಲ್ಲಿ ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಇತ್ತೀಚಿಗಷ್ಟೇ ಹೇಳಿದ್ದರು. ಏತನ್ಮಧ್ಯೆ, ಜೂನ್ 22ರಂದು ಬಿಡುಗಡೆಯಾದ ಈ ಹಾಡು ಕೇವಲ ಮೂರು ದಿನಗಳಲ್ಲಿ 28 ಮಿಲಿಯನ್ ವೀಕ್ಷಣೆ ಕಂಡಿದೆ. ಬಹುನಿರೀಕ್ಷಿತ ಈ ತಮಿಳು ಚಲನಚಿತ್ರವು ಈ ವರ್ಷ ಅಕ್ಟೋಬರ್ 19ರಂದು ತೆರೆಗೆ ಬರಲಿದೆ.
ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…
ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…
ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…