ಕೆಜಿಎಫ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಟೈಟಲ್ ಅನೌನ್ಸ್ ಗೆ ಕೌಂಟ್ ಡೌನ್ ಶುರುವಾಗಿದೆ.
ಇಂದು ಬೆಳಗ್ಗೆ 9:55 ಕ್ಕೆ ಯಶ್ ಅವರ ಬಹುನಿರೀಕ್ಷಿತ ಸಿನಿಮಾದ ಟೈಟಲ್ ಅನೌನ್ಸ್ ಆಗಲಿದ್ದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಯಶ್ ಅವರ 19ನೇ ಸಿನಿಮಾ ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ ಈ ಸಿನಿಮಾದ ಹೆಸರು ಏನಿರಲಿದೆ ಎಂದು ಸಿನಿ ರಸಿಕರು ಕುತೂಹಲ ಭರಿತರಾಗಿದ್ದಾರೆ.
ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೋ ಬದಲಿಸಿದ್ದ ಯಶ್ ಲೋಡಿಂಗ್ ಎಂಬ ಬರಹವಿರುವ ಫೊಟೋವನ್ನು ಅಪ್ಲೋಡ್ ಮಾಡಿದ್ದರು. ಇದರಿಂದ ಅಭಿಮಾನಿಗಳಲ್ಲಿ ಯಶ್ ತಮ್ಮ ಮುಂದಿನ ಚಿತ್ರದ ಅಪ್ಡೇಟ್ ನೀಡಿದ್ದಾರಾ ? ಎಂಬ ಕುತೂಹಲ ಮೂಡಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿ ಕ್ವೆಶ್ಚನ್ ಮಾರ್ಕ್ ಇರುವ ಫೊಟೋವೊಂದನ್ನು ಹಂಚಿಕೊಂಡು ಡಿಸೆಂಬರ್ 8 ಕ್ಕೆ ತಮ್ಮ ಮುಂದಿನ ಸಿನಿಮಾದ ಟೈಟಲ್ ಅನೌನ್ಸ್ ಮಾಡುವುದಾಗಿ ಯಶ್ ಹೇಳಿಕೊಂಡಿದ್ದರು.
ಇದೀಗ ಆ ದಿನ ಬಂದೇ ಬಿಟ್ಟಿದೆ ಎಲ್ಲಾ ಸಿನಿರಸಿಕರ ಚಿತ್ತ ಯಶ್ ಮುಂದಿನ ಸನಿಮಾದತ್ತ ನೆಟ್ಟಿದೆ. ಅಭಿಮಾನಿಗಳೆಲ್ಲರೂ ಕೂಡ ಇಂದು ಬೆಳಗ್ಗೆ 9:55 ಕ್ಕೆ ಅನೌನ್ಸ್ ಆಗಲಿರುವ ರಾಕಿ ಬಾಯ್ ಮುಂದಿನ ಸಿನಿಮಾ ಅಪ್ಡೇಟ್ ಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಭಿಮಾನಿಗಳ ಈ ಕುತೂಹಲಕ್ಕೆ ಉತ್ತರ ಸಿಗಲಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…