ಭಾರಿ ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.
ಕೆಲವೇ ದಿನಗಳ ಹಿಂದೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್, ರಿಷಬ್ ಶೆಟ್ಟಿ, ಪವನ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್ ಮೊರೆ ಹೋಗಿದ್ದರು.
ನಿತಿನ್ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಡಿಬಂದಿದೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಒಡೆತನದ ಪರಂವಾ ಪಿಕ್ಚರ್ಸ್ ಮೂಲಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ಆಗುತ್ತಿದೆ.
ಕೋರ್ಟ್ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್ ರಾಜ್ಕುಮಾರ್ ಕೂಡ ಈ ಚಿತ್ರದ ಪ್ರಮೋಷನಲ್ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…