ಚಿತ್ರ ಮಂಜರಿ

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿ ಬಾಸ್‌

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಹಿರಿಯ ನಟಿ ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಮನೆಗೆ ತರೆಳಿದ ದರ್ಶನ್‌ ಅವರು ಲೀಲಾವತಿಯವರ ಪುತ್ರ ವಿನೋದ್‌ ರಾಜ್‌ ಬಳಿ ಯೋಗಕ್ಷೇಮ ವಿಚಾರಿಸಿದ್ದು ಕೆಲಕಾಲ ಅಲ್ಲಿಯೇ ಇದ್ದು ನಾನಾ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಚಿತ್ರರಂಗದ ಹಲವು ನಟ ನಟಿಯರು ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ಮನೆಗೆ ತೆರಳಿ ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ನಟಿಯ ಆರೋಗ್ಯ ವಿಚಾರಿಸುತ್ತಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ನಟ ಅರ್ಜುನ್‌ ಸರ್ಜಾ ಅವರು ಕೂಡ ಲೀಲಾವತಿಯವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದರು. ನೆನ್ನೆ ದರಶನ್‌ ಅವರು ಕೂಡ ಲೀಲಾವತಿಯವರನ್ನು ಭೇಟಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಲೀಲಾವತಿಯವರು ನಿಧನರಾದರೆಂಬ ಸುಳ್ಳು ವದಂತಿಯನ್ನು ಹಬ್ಬಿಸಲಾಗಿತ್ತು. ಇದು ಅವರ ಪುತ್ರ ವಿನೋದ್‌ ರಾಜ್‌ ಅವರಿಗೆ ಬಹಳ ಬೇಸರ ತರಿಸಿತ್ತು. ಈ ಬಗ್ಗೆ ವಿನೋದ್‌ ರಾಜ್‌ ಅವರು ಸಂದರ್ಶನವೊಂದರಲ್ಲಿ ತಮ್ಮ ತಾಯಿಯ ಆರೋಗ್ಯದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದರು. ಅಮ್ಮ ಆರೋಗ್ಯವಾಗಿದ್ದಾರೆ. ಅವರ ವಯಸ್ಸಿಗೆ ತಕ್ಕಂತೆ ಹೇಗೆ ಇರಬೇಕೋ ಹಾಗೆ ಇದ್ದಾರೆ ಅಮ್ಮ 86-87 ವಯಸ್ಸು ಮುಟ್ಟಿದ್ದಾರೆ. ಅವರ ಕಾಲದಲ್ಲಿ ಒಂದು ದಿನಕ್ಕೆ ನಾಲ್ಕು ಸಿನಿಮಾಗೆ ಪಾತ್ರ ಮಾಡಿದವರು. ಅಮ್ಮ ಒಟ್ಟು 650 ಸಿನಿಮಾಗಳಲ್ಲಿ ಅಭಿನಯ ಮಾಡಿದ್ದಾರೆ. ಜನ ಯಾಕೆ ಅಮ್ಮನ ಸಾವಿನ ಸುದ್ದಿ ಹಬ್ಬಿಸಿದ್ರು ಅನ್ನೋದನ್ನು ಮಂಜುನಾಥನಿಗೆ ಬಿಟ್ಟಿದ್ದೀವಿ. ಅವನೇ ನೋಡಿಕೊಳ್ಳಬೇಕು ಅಷ್ಟೇ ಎಂದು ಹೇಳಿದ್ದರು.
ನಟಿ ಲೀಲಾವತಿಯವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ದಶಕಗಳಕಾಲ ಬಹುಬೇಡಿಕೆಯ ನಟಿಯಾಗಿ ಮಿಂಚಿದ್ದ ಲೀಲಾವತಿಯವರು ತಮ್ಮ ಅತ್ಯದ್ಭುತ ನಟನೆಯ ಮೂಲಕ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

lokesh

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

5 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

7 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

7 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

7 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

9 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

10 hours ago