Mysore
24
broken clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಡಾಲಿ ಧನಂಜಯ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಟ್ರೈಲರ್‌ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ‘ಡಾಲಿ’ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಸಿನಿಮಾದ ಅಧಿಕೃತ ಟ್ರೈಲರ್‌ ಭಾನುವಾರ ಬಿಡುಗಡೆಯಾಗಿದೆ.

‘ಹೆಡ್‌ ಬುಷ್‌’ ಸಿನಿಮಾ ಪತ್ರಕರ್ತ ಅಗ್ನಿ ಶ್ರೀಧರ್‌ ಅವರ ಆತ್ಮಕಥೆ ‘ದಾದಾಗಿರಿಯ ಆ ದಿನಗಳು’ ಕೃತಿಯನ್ನು ಆಧರಿಸಿದ್ದಾಗಿದೆ. ಬೆಂಗಳೂರಿನ ಭೂಗತ ದೊರೆ ಎಂ.ಪಿ ಜಯರಾಜ್‌ ಪಾತ್ರವನ್ನು ಧನಂಜಯ್‌ ಅವರು ನಿಭಾಯಿಸಿದ್ದಾರೆ. ಚಿತ್ರವನ್ನು ಶೂನ್ಯ ಅವರು ನಿರ್ದೇಶಿಸಿದ್ದಾರೆ.

ಸ್ವತಃ ಅಗ್ನಿ ಶ್ರೀಧರ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮುಂದುವರಿದು ನೋಡುವುದಾದರೆ 1970ರ ಬೆಂಗಳೂರಿನ ಭೂಗತ ಜಗತ್ತನ್ನು ಚಿತ್ರದಲ್ಲಿ ತೋರಿಸಲಾಗಿದೆ. ‘ಡಾಲಿ’ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರ, ‘ಲೂಸ್ ಮಾದ’ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಹೀಗೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದ ಬಿಡುಗಡೆಗೆ ತಡೆ ಕೋರಿ ಎಂ.ಪಿ ಜಯರಾಜ್‌ ಪುತ್ರ ಅಜಿತ್‌ ಜಯರಾಜ್‌ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರಾದರೂ, ಅದೆಲ್ಲವನ್ನೂ ಮೀರಿ ಇಂದು ಚಿತ್ರದ ಬಿಡುಗಡೆಯಾಗಿದೆ. ಟ್ರೈಲರ್‌‌ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸ್ಪಂದನೆ ಸಿಕ್ಕಿದೆ.

ಸಿನಿಮಾ ಅಕ್ಟೋಬರ್‌ 21ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ .

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!