ಹೊಸದಿಲ್ಲಿ: ‘ದಿಲ್ ದೇಕೆ ದೇಖೋ’ ಖ್ಯಾತಿಯ ಬಾಲಿವುಡ್‌ನ ಹಿರಿಯ ನಟಿ, ನಿರ್ಮಾಪಕಿ ಆಶಾ ಪಾರೇಖ್ ೨೦೨೦ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಆಶಾ ಬೋಸ್ಲೆ, ಹೇಮಾ ಮಾಲಿನಿ, ಪೂನಂ ಧಿಲ್ಲೋನ್, ಉದಿತ್ ನಾರಾಯಣ್ ಮತ್ತು ಟಿ.ಎಸ್.ನಾಗಾಭರಣ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಭಾರತೀಯ ಚಿತ್ರರಂಗದಲ್ಲಿನ ಸಾಧನೆಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಯನ್ನು ೭೯ರ ಹರೆಯದ ಪಾರೇಖ್‌ಗೆ ನೀಡಲು ತೀರ್ಮಾನ ಮಾಡಿದೆ.
೬೮ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಗೌರವ ನೀಡಲಾಗುವುದು’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ಹೇಳಿದ್ದಾರೆ.
ಸಂಕ್ಷಿಪ್ತ ಪರಿಚಯ
೧೯೫೦ರ ದಶಕದಲ್ಲಿ ಬಾಲ ನಟಿಯಾಗಿ ಬಾಲಿವುಡ್‌ಗೆ ಕಾಲಿಟ್ಟ ಪಾರೇಖ್, ೧೯೬೦-೭೦ರ ದಶಕದಲ್ಲಿ ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿದ ಯಶಸ್ವಿ ತಾರೆ. ೧೯೫೨ರಲ್ಲಿ ‘ಆಸ್ಮಾನ್’ ಚಿತ್ರದ ಮೂಲಕ ತಮ್ಮ ೧೦ನೇ ವಯಸ್ಸಿನಿಂದಲೇ ನಟನೆ ಆರಂಭಿಸಿದ ಅವರು, ಇಲ್ಲಿವರೆಗೆ ೯೫ಕ್ಕೂ ಹೆಚ್ಚು ಚಿತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ೧೯೫೪ರಲ್ಲಿ ಬಿಮಲ್ ರಾಯ್ ಅವರ ‘ಬಾಪ್ ಬೇಟಿ’ ಚಿತ್ರದ ಮೂಲಕ ಆಶಾ ಹಿಂದಿ ಚಿತ್ರರಂಗದಲ್ಲಿ ಚಿರಪರಿಚಿತರಾದರು.
೧೯೫೯ರಲ್ಲಿ ಅಂದಿನ ಸೂಪರ್ ಸ್ಟಾರ್ ಶಮ್ಮಿ ಕಪೂರ್ಗೆ ಜೊತೆಯಾಗಿ ನಾಸೀರ್ ಹುಸೈನ್ ಅವರ ‘ದಿಲ್ ದೇಕೆ ದೇಖೋ’ ಚಿತ್ರದಲ್ಲಿ ನಾಯಕಿಯಾಗಿ ಬಡ್ತಿ ಪಡೆದು, ಮೊದಲ ಚಿತ್ರದಲ್ಲಿಯೇ ಪ್ರೇಕ್ಷಕರ ಮನ ಗೆದ್ದರು. ’ಕಟಿ ಪತಂಗ್, ತೀಸ್ರಿ ಮಂಜಿಲ್, ಬಹರೋನ್ ಖೆ ಸಪ್ನೆ, ಪ್ಯಾರ್ ಕಾ ಮೌಸಂ’ ಮೊದಲಾದ ಚಿತ್ರಗಳ ಮೂಲಕ ಹಿಂದಿ ಚಿತ್ರರಂಗದಲ್ಲಿನ ಅತ್ಯಂತ ಪ್ರಭಾವಶಾಲಿ ನಟಿಯಾಗಿ ಹೊರಹೊಮ್ಮಿದರು.
ನಿರ್ಮಾಪಕಿ, ನಿರ್ದೇಶಕಿಯಾಗಿಯೂ ಗುರುತಿಸಿಕೊಂಡ ಪಾರೇಖ್, ೧೯೯೦ರಲ್ಲಿ ‘ಕೋರ ಕಾಗಜ್‘ ಎಂಬ ಟಿವಿ ಧಾರವಾಹಿಯಲ್ಲಿಯೂ ಕಾಣಿಸಿಕೊಂಡರು.
ಪ್ರಶಸ್ತಿಗಳು: ೧೯೯೨ರಲ್ಲಿ ಪದ್ಮಶ್ರೀ, ಪಡೆದ ಅವರು ೧೯೯೮?೨೦೦೧ರ ವರೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್ಸಿ)ಅಧ್ಯಕ್ಷರಾಗಿದ್ದರು. ಸೂಪರ್ಸ್ಟಾರ್ ರಜನಿಕಾಂತ್ ೨೦೧೯ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದಿದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…